ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್; ವಿಶಿಷ್ಟ ದಾಖಲೆ ಬರೆದ ಹಿಟ್‍ಮ್ಯಾನ್

Last Updated 6 ಅಕ್ಟೋಬರ್ 2021, 13:12 IST
ಅಕ್ಷರ ಗಾತ್ರ

ದುಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಭಾರತದ ಬಲಗೈ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 400 ಸಿಕ್ಸರ್‌ಗಳನ್ನು ಬಾರಿಸಿದ ಹಿರಿಮೆಗೆ ಭಾಜನರಾಗಿದ್ದಾರೆ.

ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ ಮೊತ್ತ ಮೊದಲ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ, ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಈ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಟಿ20 ಕ್ರಿಕೆಟ್ ಮಾದರಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆಯನ್ನು ವೆಸ್ಟ್‌ಇಂಡೀಸ್‌ನ ದೈತ್ಯ ಕ್ರಿಸ್ ಗೇಲ್ ಹೊಂದಿದ್ದಾರೆ. ಅವರು ಸಹಸ್ರ ಸಿಕ್ಸರ್‌ಗಳನ್ನು ಸಿಡಿಸಿದ (1042) ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಆಗಿದ್ದಾರೆ.

ವಿಂಡೀಸ್‌ನವರೇ ಆದ ಕೀರನ್ ಪೊಲಾರ್ಡ್ (758) ಹಾಗೂ ಆ್ಯಂಡ್ರೆ ರಸೆಲ್ (510) ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸರದಾರರು:
1. ಕ್ರಿಸ್ ಗೇಲ್ (1042)
2. ಕೀರನ್ ಪೊಲಾರ್ಡ್ (758)
3. ಆ್ಯಂಡ್ರೆ ರಸೆಲ್ (510)
4. ಬ್ರೆಂಡನ್ ಮೆಕಲಮ್ (485)
5. ಶೇನ್ ವ್ಯಾಟ್ಸನ್ (467)
6. ಎಬಿ ಡಿವಿಲಿಯರ್ಸ್ (434)
7. ರೋಹಿತ್ ಶರ್ಮಾ (400)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT