ಭಾನುವಾರ, ಮೇ 9, 2021
25 °C

ರೋಹಿತ್‌ಗೆ ₹ 12 ಲಕ್ಷ ದಂಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ : ನಿಗದಿತ ಅವಧಿ ಯಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ.

ಐಪಿಎಲ್‌ ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ಚೆನ್ನೈನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಆರು ವಿಕೆಟ್‌ಗಳಿಂದ ಸೋತಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರೋಹಿತ್ ಪಡೆ, ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ (24ಕ್ಕೆ 4) ಅವರ ದಾಳಿಗೆ ನಲುಗಿತ್ತು. ನಿಗದಿತ ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ ಕಳೆದುಕೊಂಡು 137 ರನ್‌ ಗಳಿಸಿತ್ತು. ಡೆಲ್ಲಿ ಕ್ಯಾಪಿಲಟ್ಸ್ ಐದು ಎಸೆತಗಳು ಬಾಕಿ ಇರುವಂತೆಯೇ ಜಯದ ದಡ ತಲುಪಿತ್ತು.

‘ಮುಂಬೈ ತಂಡವು ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ನಾಯಕ ರೋಹಿತ್ ಶರ್ಮಾ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿದೆ. ನಿಧಾನಗತಿಯ ಓವರ್‌ಗೆ ಸಂಬಂಧಿಸಿದಂತೆ ತಂಡವು ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಐಪಿಎಲ್‌ ನಿಯಮಾವಳಿ ಉಲ್ಲಂಘಿಸಿದೆ‘ ಎಂದು ಇಂಡಿಯನ್ ಪ್ರೀಮಿಯಲ್ ಲೀಗ್‌ನ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು