ಶುಕ್ರವಾರ, ಅಕ್ಟೋಬರ್ 29, 2021
20 °C

IPL 2021 | RCB vs DC: ಭರತ್-ಮ್ಯಾಕ್ಸ್‌ವೆಲ್ ಅಬ್ಬರ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು

Published:
Updated:
ಶ್ರೀಕರ್ ಭರತ್ (78*) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (51*) ಬಿರುಸಿನ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಭರತ್ ನೈಜ ಹೀರೊ ಎನಿಸಿದರು.