IPL 2021 | RCB vs MI: ಹರ್ಷಲ್ 'ಹ್ಯಾಟ್ರಿಕ್'; ಮುಂಬೈ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು
LIVE
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 'ಹ್ಯಾಟ್ರಿಕ್' ಸೇರಿದಂತೆ ನಾಲ್ಕು ವಿಕೆಟ್ ಪಡೆದ ಹರ್ಷಲ್ ಪಟೇಲ್ ಆರ್‌ಸಿಬಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಸಹ ಅರ್ಧಶತಕಗಳ ಸಾಧನೆ ಮಾಡಿದರು.