ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021 | RCB vs RR: ಪಡಿಕ್ಕಲ್ ಚೊಚ್ಚಲ ಶತಕದ ಪಂಚ್; ರಾಜಸ್ಥಾನ್ ಪಲ್ಟಿ
LIVE

ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ತ ಪಡಿಕ್ಕಲ್ ಚೊಚ್ಚಲ ಶತಕ (101*) ಹಾಗೂ ನಾಯಕ ವಿರಾಟ್ ಕೊಹ್ಲಿ (72*) ಅಮೋಘ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Last Updated 22 ಏಪ್ರಿಲ್ 2021, 18:32 IST
ಅಕ್ಷರ ಗಾತ್ರ
18:3122 Apr 2021

ಕೋವಿಡ್‌ನಿಂದ ಗೆದ್ದು ಬಂದು ಐಪಿಎಲ್‌ನಲ್ಲಿ ಶತಕ ಚಚ್ಚಿದ ಪಡಿಕ್ಕಲ್

18:1222 Apr 2021

ದಾಖಲೆಗಳ ಮೇಲೆ ದಾಖಲೆಗಳನ್ನು ಬರೆದ ಪಡಿಕ್ಕಲ್-ಕೊಹ್ಲಿ

17:5422 Apr 2021

ಪಡಿಕ್ಕಲ್, ಕೊಹ್ಲಿ ದಾಖಲೆ ವೀರರು

17:3822 Apr 2021

ಆರ್‌ಸಿಬಿ ಸತತ 4ನೇ ಗೆಲುವು

17:3722 Apr 2021

ಆರ್‌ಸಿಬಿ ನೋಲಾಸ್ ಗೆಲುವು

17:3622 Apr 2021

ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ 6,000 ರನ್ ಮೈಲಿಗಲ್ಲು

17:3522 Apr 2021

ಐಪಿಎಲ್‌ನಲ್ಲಿ ಪಡಿಕ್ಕಲ್ ಚೊಚ್ಚಲ ಶತಕ

17:2622 Apr 2021

ಆರ್‌ಸಿಬಿಗೆ 10 ವಿಕೆಟ್ ಅಂತರದ ಭರ್ಜರಿ ಗೆಲುವು

ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ತ ಪಡಿಕ್ಕಲ್ ಚೊಚ್ಚಲ ಶತಕ (101*) ಹಾಗೂ ನಾಯಕ ವಿರಾಟ್ ಕೊಹ್ಲಿ (72*) ಅಮೋಘ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 

ಇದರೊಂದಿಗೆ ಸತತ ನಾಲ್ಕನೇ ಗೆಲುವು ಬಾರಿಸಿರುವ ಆರ್‌ಸಿಬಿ, ಒಟ್ಟು ಎಂಟು ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಮಗದೊಮ್ಮೆ ಅಗ್ರಸ್ಥಾನಕ್ಕೇರಿದೆ. ಅಲ್ಲದೆ 200ನೇ ಪಂದ್ಯದಲ್ಲಿ ಸ್ಮರಣೀಯ ಗೆಲುವು ದಾಖಲಿಸಿದೆ. 

178 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಬೆಂಗಳೂರು ತಂಡಕ್ಕೆ ಪಡಿಕ್ಕಲ್ ಹಾಗೂ ಕೊಹ್ಲಿ ಬಿರುಸಿನ ಆರಂಭವೊದರಿಸಿದರು. ಆರಂಭದಲ್ಲಿ ಕೊಹ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರೆ ಪಡಿಕ್ಕಲ್ ಎದುರಾಳಿ ಬೌಲರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಅಲ್ಲದೆ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು. 

ಅರ್ಧಶತಕದ ಬಳಿಕ ಪಡಿಕ್ಕಲ್, ವಾಂಖೆಡೆ ಮೈದಾನದಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳ ಸುರಿಮಳೆಗೈದರು. ಪರಿಣಾಮ 10 ಓವರ್‌ಗಳಲ್ಲಿ 107 ರನ್‌ಗಳು ಹರಿದು ಬಂದಿದ್ದವು. ಅತ್ತ ನಾಯಕನ ಆಟವಾಡಿದ ಕೊಹ್ಲಿ, ಸಹ ಗೇರ್ ಬದಲಿಸಿದರು. ಅಲ್ಲದೆ 34 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಸಂಭ್ರಮಿಸಿದರು. 

ಅಮೋಘ ಆಟವಾಡಿದ ಪಡಿಕ್ಕಲ್ ಕೇವಲ 51 ಎಸೆತಗಳಲ್ಲಿ ಐಪಿಎಲ್‌ನಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದರು. ಅಂತಿಮವಾಗಿ ಆರ್‌ಸಿಬಿ 16.3 ಓವರ್‌ಗಳಲ್ಲಿ ನೋಲಾಸ್ ಗೆಲುವು ಬಾರಿಸಿತ್ತು. 

52 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 11 ಬೌಂಡರಿ ಹಾಗೂ ಆರು ಭರ್ಜರಿ ಸಿಕ್ಸರ್ ನೆರವಿನಿಂದ 101 ರನ್ ಗಳಿಸಿ ಅಜೇಯರಾಗುಳಿದರು. ಅತ್ತ ನಾಯಕ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 72ರನ್ ಗಳಿಸಿ ಔಟಾಗದೆ ಉಳಿದರು. 

17:1722 Apr 2021

ಗೆಲುವಿನ ಸನಿಹದಲ್ಲಿ ಆರ್‌ಸಿಬಿ

17:0622 Apr 2021

ನಾಯಕನ ಆಟವಾಡಿದ ಕೊಹ್ಲಿ