ಶನಿವಾರ, ಅಕ್ಟೋಬರ್ 16, 2021
22 °C

IPL 2021: 19 ಎಸೆತಗಳಲ್ಲಿ ಚೊಚ್ಚಲ ಫಿಫ್ಟಿ ಬಾರಿಸಿದ 19ರ ಹರೆಯದ ಜೈಸ್ವಾಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಕೇವಲ 19 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಬಾರಿಸುವ ಮೂಲಕ ಗಮನ ಗಮನ ಸೆಳೆದಿದ್ದಾರೆ. 

ಶನಿವಾರ ಅಬುಧಾಬಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 19 ವರ್ಷದ ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 

ಇದನ್ನೂ ಓದಿ: 

ಈ ಮೂಲಕ ಉಜ್ವಲ ಭವಿಷ್ಯವನ್ನು ಸಾರಿದ್ದಾರೆ. ಒಟ್ಟಾರೆಯಾಗಿ 21 ಎಸೆತಗಳನ್ನು ಎದುರಿಸಿದ ಜೈಸ್ವಾಲ್ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿ ಹಾಗೂ ಮೂರು ಮನಮೋಹಕ ಸಿಕ್ಸರ್‌ಗಳು ಸೇರಿದ್ದವು. 

ಇದರೊಂದಿಗೆ ಐಪಿಎಲ್‌ನಲ್ಲಿ ಅತಿ ವೇಗದಲ್ಲಿ ಅರ್ಧಶತಕ ಗಳಿಸಿದ ಭಾರತದ ಅನ್‌ಕ್ಯಾಪ್ಡ್ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಇಶಾನ್ ಕಿಶನ್ ನಂತರದ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 

2018ರಲ್ಲಿ ಇಶಾನ್ ಕಿಶನ್, ಕೆಕೆಆರ್ ವಿರುದ್ಧ ಕೇವಲ 17 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದರು. ಇನ್ನು ಪ್ರಸಕ್ತ ಸಾಲಿನಲ್ಲೇ ದೀಪಕ್ ಹೂಡಾ, ರಾಜಸ್ಥಾನ್ ವಿರುದ್ಧವೇ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು