ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ವಾರ್ನ್, ದ್ರಾವಿಡ್ ದಿಗ್ಗಜರ ಸಾಲಿಗೆ ಸೇರಿದ ಸಂಜು

Last Updated 12 ಏಪ್ರಿಲ್ 2021, 14:09 IST
ಅಕ್ಷರ ಗಾತ್ರ

ಮುಂಬೈ: ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್, ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನೂತನ ನಾಯಕರಾಗಿ ಪದಾರ್ಪಣೆ ಮಾಡಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಮಾಜಿ ಲೆಗ್ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಹಾಗೂ 'ದಿ ವಾಲ್' ಖ್ಯಾತಿಯ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರಂತಹ ದಿಗ್ಗಜರ ಸಾಲಿಗೆ ಸಂಜು ಸ್ಯಾಮ್ಸನ್ ಸೇರ್ಪಡೆಯಾಗಿದ್ದಾರೆ.

ಶೇನ್ ವಾರ್ನ್ ಮುಂದಾಳತ್ವದಲ್ಲಿ ರಾಜಸ್ಥಾನ, 2008ರಲ್ಲಿ ನಡೆದ ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿತ್ತು. ಅಲ್ಲಿಂದ ಬಳಿಕ ತಂಡವು ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಅನೇಕ ಏಳು-ಬೀಳುಗಳನ್ನು ಕಂಡಿತ್ತು.

ರಾಹುಲ್ ದ್ರಾವಿಡ್ ಅವರು 2012ರಿಂದ 2013ರ ವರೆಗೆ ರಾಜಸ್ಥಾನ ತಂಡದ ನಾಯಕತ್ವವನ್ನು ವಹಿಸಿದ್ದರು. ಅಲ್ಲದೆ ತಂಡದ ಮಾರ್ಗದರ್ಶಕರಾಗಿಯೂ ತಮ್ಮ ಸೇವೆ ಸಲ್ಲಿಸಿದ್ದರು.

ಸಂಜು ಪ್ರಗತಿಯಲ್ಲಿ ರಾಹುಲ್ ದ್ರಾವಿಡ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೆ ತಮ್ಮ ಗುರು ದ್ರಾವಿಡ್ ರೀತಿಯಲ್ಲಿ ಶಾಂತಚಿತ್ತ ಸ್ವಭಾವವನ್ನು ಕಾಪಾಡಿಕೊಂಡಿದ್ದಾರೆ.

ಎಂಟು ವರ್ಷಗಳ ಹಿಂದೆ 2013ರಲ್ಲಿ 18 ವರ್ಷದ ಸಂಜು, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧವೇ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ್ದರು. ಈಗ 106 ಐಪಿಎಲ್ ಪಂದ್ಯಗಳ ಬಳಿಕ ನಾಯಕತ್ವ ಹೊಣೆಯನ್ನು ವಹಿಸುತ್ತಿದ್ದಾರೆ. ಒಟ್ಟಾರೆಯಾಗಿ ರಾಜಸ್ಥಾನ ತಂಡದ ನಾಯಕತ್ವ ವಹಿಸುತ್ತಿರುವ ಆರನೇ ಆಟಗಾರ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ.

ಶೇನ್ ವಾರ್ನ್, ರಾಹುಲ್ ದ್ರಾವಿಡ್ ಹೊರತಾಗಿ, ಶೇನ್ ವಾಟ್ಸನ್, ಸ್ಟೀವ್ ಸ್ಮಿತ್, ಅಜಿಂಕ್ಯ ರಹಾನೆ ಕೂಡಾ ರಾಜಸ್ಥಾನ ತಂಡವನ್ನು ಮುನ್ನಡೆಸಿದ್ದಾರೆ.

ರೋಹಿತ್ ಶರ್ಮಾ ರೀತಿಯಲ್ಲಿ ಪವರ್‌ಫುಲ್ ಹೊಡೆತಕ್ಕೆ ಹೆಸರುವಾಸಿಯಾಗಿರುವ ಸಂಜು, ಈಗಾಗಲೇ ಐಪಿಎಲ್‌ನಲ್ಲಿ ಎರಡು ಶತಕಗಳನ್ನು ಬಾರಿಸಿದ್ದಾರೆ. ಟೀಮ್ ಇಂಡಿಯಾದಲ್ಲೂ ಅವಕಾಶ ಗಿಟ್ಟಿಸಿದರೂ ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT