ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021: ಬಟ್ಲರ್ ಬೊಂಬಾಟ್ ಆಟ; ಚೊಚ್ಚಲ ಶತಕ ಸಾಧನೆ

ಅಕ್ಷರ ಗಾತ್ರ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್, ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ.

ನವದಹೆಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಜೋಸ್ ಬಟ್ಲರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.

ಈ ಮೂಲಕ ಐಪಿಎಲ್‌ನಲ್ಲಿ ಶಕಕ ಬಾರಿಸಿದ ಇಂಗ್ಲೆಂಡ್‌ನ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಭಾಜನವಾಗಿದ್ದಾರೆ.

ಈ ಹಿಂದೆ ಕೆವಿನ್ ಪೀಟರ್ಸನ್, ಬೆನ್ ಸ್ಟೋಕ್ಸ್ ಹಾಗೂ ಜಾನಿ ಬೆಸ್ಟೊ ಐಪಿಎಲ್‌ನಲ್ಲಿ ಶತಕ ಗಳಿಸಿದ್ದರು. ಈ ಪೈಕಿ ಬೆನ್ ಸ್ಟೋಕ್ಸ್ ಎರಡು ಬಾರಿ ಮೂರಂಕಿಯನ್ನು ತಲುಪಿದ್ದರು.

ಸನ್‌ರೈಸರ್ಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಬಟ್ಲರ್, ಬೌಂಡರಿ ಹಾಗೂ ಸಿಕ್ಸರ್‌ಗಳ ಸುರಿಮಳೆಗೈದರು. 56 ಎಸೆತಗಳಲ್ಲಿ ಬಟ್ಲರ್ ಶತಕ ಸಾಧನೆ ಮಾಡಿದರು.

ಅಂತಿಮವಾಗಿ 124 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅವರ ಈ ಮನಮೋಹಕ ಆಟದಲ್ಲಿ 11 ಬೌಂಡರಿಗಳು ಹಾಗೂ ಎಂಟು ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.

ಅಲ್ಲದೆ ಎರಡನೇ ವಿಕೆಟ್‌ಗೆ ನಾಯಕ ಸಂಜು ಸ್ಯಾಮ್ಸನ್ ಜೊತೆಗೆ 150 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ಐಪಿಎಲ್‌ನಲ್ಲಿ ಅತಿ ಹೆಚ್ಚು ಆರು ಶತಕಗಳನ್ನು ಬಾರಿಸಿದ ದಾಖಲೆಯನ್ನು ಕ್ರಿಸ್ ಗೇಲ್ ಹೊಂದಿದ್ದಾರೆ. ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ 5, ಡೇವಿಡ್ ವಾರ್ನರ್ ಹಾಗೂ ಶೇನ್ ವಾಟ್ಸನ್ ತಲಾ ನಾಲ್ಕು ಶತಕಗಳನ್ನು ಬಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT