ಶನಿವಾರ, ಅಕ್ಟೋಬರ್ 23, 2021
24 °C

ಶಿಮ್ರೊನ್ ಹೆಟ್ಮೆಯರ್ ವಿಶಿಷ್ಟ ಕೇಶ ವಿನ್ಯಾಸಕ್ಕೆ ಮನಸೋತ ಅಭಿಮಾನಿಗಳು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಶಿಮ್ರೊನ್ ಹೆಟ್ಮೆಯರ್ ವಿಶಿಷ್ಟ ಕೇಶ ವಿನ್ಯಾಸಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. 
 
ಡೆಲ್ಲಿ ಫ್ರಾಂಚೈಸಿಯ ನೀಲಿ ಜೆರ್ಸಿಗೆ ತಕ್ಕಂತೆ ಕೂದಲಿಗೂ ನೀಲಿ ಬಣ್ಣವನ್ನು ಬಳಿದಿದ್ದಾರೆ. ಈ ಮೂಲಕ ಡೆಲ್ಲಿ ತಂಡದ ಮೇಲಿನ ತಮ್ಮ ಪ್ರೀತಿಯನ್ನು ಮೆರೆದಿದ್ದಾರೆ. 

ನೀಲಿ ವರ್ಣದ ಕೇಶ ವಿನ್ಯಾಸದ ಮೂಲಕ ಶಿಮ್ರೊನ್ ಹೆಟ್ಮೆಯರ್ ತಂಡದ ಮೇಲೆ ತೋರಿರುವ ಅರ್ಪಣಾ ಮನೋಭಾವವನ್ನು ಅಭಿಮಾನಿಗಳು ಕೊಂಡಾಡಿದ್ದಾರೆ. 

ಕೇನ್ ವಿಲಿಯಮ್ಸನ್ ಅದ್ಭುತ ಕ್ಯಾಚ್...
ಏತನ್ಮಧ್ಯೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ. 

ಕೇನ್ ವಿಲಿಯಮ್ಸನ್ ಹಿಡಿದಿರುವ ಕ್ಯಾಚ್‌ಗೆ ಅಭಿಮಾನಿಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. 

ಅಂದ ಹಾಗೆ ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು