ಸೋಮವಾರ, ಮೇ 23, 2022
30 °C

IPL 2021: ಚೆನ್ನೈ ಪರ ಮಗದೊಂದು ಸ್ಮರಣೀಯ ದಾಖಲೆ ಬರೆದ ಧೋನಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಗದೊಂದು ಸ್ಮರಣೀಯ ದಾಖಲೆ ಬರೆದಿದ್ದಾರೆ.

ಸಿಎಸ್‌ಕೆ ಪರ ವಿಕೆಟ್ ಕೀಪರ್ ಆಗಿ 100 ಕ್ಯಾಚ್‌ಗಳನ್ನು ಪಡೆದ ಗೌರವಕ್ಕೆ ಮಹಿ ಭಾಜನರಾಗಿದ್ದಾರೆ.

ಇದನ್ನೂ ಓದಿ: 

ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಧೋನಿ, ಸಿಎಸ್‌ಕೆ ಪರ ವಿಕೆಟ್ ಕೀಪರ್ ಆಗಿ ಕ್ಯಾಚ್‌ಗಳ ಶತಕದ ವಿಶಿಷ್ಟ ಮೈಲಿಗಲ್ಲು ಕ್ರಮಿಸಿದರು.

 

 

 

ವಿಕೆಟ್ ಹಿಂದುಗಡೆ ಸದಾ ಅದ್ಭುತ ಕೌಶಲ್ಯವನ್ನು ಪ್ರದರ್ಶಿಸಿರುವ 40 ವರ್ಷದ ಧೋನಿ, ಈ ಪಂದ್ಯದಲ್ಲಿ ಒಟ್ಟು ಮೂರು ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

 

ಅಲ್ಲದೆ ಜೇಸನ್ ರಾಯ್, ವೃದ್ದಿಮಾನ್ ಸಹಾ ಹಾಗೂ ಪ್ರಿಯಂ ಗಾರ್ಗ್ ಅವರನ್ನು ಹೊರದಬ್ಬುವಲ್ಲಿ ನೆರವಾದರು.

ಅಂದ ಹಾಗೆ ಐಪಿಎಲ್‌ನಲ್ಲಿ ಇದುವರೆಗೆ 215 ಪಂದ್ಯಗಳನ್ನು ಆಡಿರುವ ಧೋನಿ ಒಟ್ಟು 123 ಕ್ಯಾಚ್‌ ಹಾಗೂ 39 ಸ್ಟಂಪಿಂಗ್ ದಾಖಲೆಯನ್ನು ಹೊಂದಿದ್ದಾರೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು