ಶನಿವಾರ, ಅಕ್ಟೋಬರ್ 23, 2021
22 °C

IPL 2021: ಕಳಪೆ ಫಾರ್ಮ್; ವಾರ್ನರ್, ಮನೀಶ್‌ ಕೈಬಿಟ್ಟ ಹೈದರಾಬಾದ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಡೇವಿಡ್ ವಾರ್ನರ್, ಮನೀಶ್ ಪಾಂಡೆ ಹಾಗೂ ಕೇದಾರ್ ಜಾಧವ್ ಅವರನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಡುವ ಬಳಗದಿಂದ ಕೈಬಿಡಲಾಗಿದೆ. 

ಐಪಿಎಲ್‌ನಲ್ಲಿ ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಿಂದ ಮಾಜಿ ನಾಯಕ ಡೇವಿಡ್ ವಾರ್ನರ್ ಸೇರಿದಂತೆ ಕನ್ನಿಡಿಗ ಮನೀಶ್ ಪಾಂಡೆ ಅವರನ್ನು ಕಡೆಗಣಿಸಲಾಗಿದೆ. 

ಪ್ರಸಕ್ತ ಸಾಲಿನಲ್ಲಿ ಕಳಪೆ ಪ್ರದರ್ಶನದಿಂದಾಗಿ ವಾರ್ನರ್‌ಗೆ ನಾಯಕ ಸ್ಥಾನ ನಷ್ಟವಾಗಿತ್ತು. ಬಳಿಕ ಆಸ್ಟ್ರೇಲಿಯಾದ ಆಟಗಾರನ ಸ್ಥಾನಕ್ಕೆ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರನ್ನು ನೇಮಕ ಮಾಡಲಾಗಿತ್ತು. 

ಕಳೆದ ಕೆಲವು ವರ್ಷಗಳಿಂದ ಹೈದರಾಬಾದ್ ಪರ ಅಮೂಲ್ಯ ಆಟಗಾರ ಎನಿಸಿರುವ ವಾರ್ನರ್, ಐಪಿಎಲ್ 2021ರ ಆವೃತ್ತಿಯಲ್ಲಿ ಸತತ ವೈಫಲ್ಯವನ್ನು ಅನುಭವಿಸಿದ್ದಾರೆ. 

ಅತ್ತ 9 ಪಂದ್ಯಗಳನ್ನು ಆಡಿರುವ ಹೈದರಾಬಾದ್ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹಾಗಾಗಿ ಪ್ಲೇ-ಆಫ್ ಪ್ರವೇಶಿಸಲು ಮುಂದಿನೆಲ್ಲ ಪಂದ್ಯಗಳಲ್ಲಿ ಗೆಲುವು ದಾಖಲಿಸುವುದು ಅನಿವಾರ್ಯವೆನಿಸಿದೆ. ಹಾಗಿದ್ದರೂ ಪ್ಲೇ-ಆಫ್ ಪ್ರವೇಶವು ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಿರುತ್ತದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು