ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2021 | SRH vs MI: ಗೆದ್ದು ಸೋತ ಮುಂಬೈ ಪ್ಲೇ-ಆಫ್ ರೇಸ್‌ನಿಂದ ಔಟ್
LIVE

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 42 ರನ್ ಅಂತರದ ಗೆಲುವು ದಾಖಲಿಸಿದೆ. ಆದರೂ ಪ್ಲೇ-ಆಫ್ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಈ ಮೂಲಕ ಕೂಟದಿಂದಲೇ ನಿರ್ಗಮಿಸಿದೆ.
Last Updated 8 ಅಕ್ಟೋಬರ್ 2021, 18:54 IST
ಅಕ್ಷರ ಗಾತ್ರ
18:5208 Oct 2021

ಮುಂಬೈಗೆ ಸಮಾಧಾನಕರ ಜಯ

18:0108 Oct 2021

ಹಾಲಿ ಚಾಂಪಿಯನ್ ಮುಂಬೈ ಪ್ಲೇ-ಆಫ್ ಕನಸು ಭಗ್ನ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಅಂತಿಮ ಲೀಗ್ ಪಂದ್ಯದಲ್ಲಿ42 ರನ್ ಅಂತರದ ಗೆಲುವು ದಾಖಲಿಸಿದರೂ ಮುಂಬೈ ಇಂಡಿಯನ್ಸ್ ತಂಡವು ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾಗಿದೆ. 

ಇದರೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. ಅತ್ತ ಕೋಲ್ಕತ್ತ ನೈಟ್ ರೈಡರ್ಸ್ ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆಯಿಟ್ಟಿದೆ. 

ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಲು ಈ ಪಂದ್ಯದಲ್ಲಿ ಮುಂಬೈ 170ಕ್ಕೂ ಹೆಚ್ಚು ರನ್‌ಗಳ ಗೆಲುವು ದಾಖಲಿಸಬೇಕಿತ್ತು. ಇದಕ್ಕೆ ತಕ್ಕಂತೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ  ಮುಂಬೈ, ಇಶಾನ್ ಕಿಶನ್ (84) ಹಾಗೂ ಸೂರ್ಯಕುಮಾರ್ ಯಾದವ್ (82) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಒಂಬತ್ತು ವಿಕೆಟ್ ನಷ್ಟಕ್ಕೆ 235 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.  ಇಶಾನ್ 32 ಎಸೆತಗಳಲ್ಲಿ 84 ರನ್ ಹಾಗೂ ಸೂರ್ಯಕುಮಾರ್ 40 ಎಸೆತಗಳಲ್ಲಿ 82 ರನ್ ಗಳಿಸಿದರು. 

ಬಳಿಕ ಗುರಿ ಬೆನ್ನತ್ತಿದ ಹೈದರಾಬಾದ್ ಎಂಟು ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಸಮರ್ಥವಾಯಿತು.  

17:1908 Oct 2021

ಮುಂಬೈ ಮೇಲುಗೈ

16:5608 Oct 2021

33 ರನ್ ಗಳಿಸಿ ಅಭಿಷೇಕ್ ಔಟ್

16:4708 Oct 2021

ಪವರ್ ಪ್ಲೇ ಅಂತ್ಯಕ್ಕೆ ಹೈದರಾಬಾದ್ 70/1

16:3508 Oct 2021

ಹೈದರಾಬಾದ್ ದಿಟ್ಟ ಉತ್ತರ

ಬೃಹತ್ ಗುರಿ ಬೆನ್ನತ್ತಿದ ಹೈದರಾಬಾದ್ ತಂಡಕ್ಕೆ ಆರಂಭಿಕರಾದ ಜೇಸನ್ ರಾಯ್ ಹಾಗೂ ಅಭಿಷೇಕ್ ಶರ್ಮಾ ಬಿರುಸಿನ ಆರಂಭವೊದಗಿಸಿದರು. ಪರಿಣಾಮ 4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿತ್ತು. 

15:5708 Oct 2021

ಹೈದರಾಬಾದ್ ಗೆಲುವಿಗೆ 236 ರನ್ ಗುರಿ

ಇಶಾನ್ ಕಿಶನ್ (84) ಹಾಗೂ ಸೂರ್ಯಕುಮಾರ್ ಯಾದವ್ (82) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 235 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ. 

ಇಶಾನ್ 32 ಎಸೆತಗಳಲ್ಲಿ 84 ರನ್ ಹಾಗೂ ಸೂರ್ಯಕುಮಾರ್ 40 ಎಸೆತಗಳಲ್ಲಿ 82 ರನ್ ಗಳಿಸಿದರು. 

15:5108 Oct 2021

ಸೂರ್ಯಕುಮಾರ್ ಯಾದವ್ 24 ಎಸೆತಗಳಲ್ಲಿ ಫಿಫ್ಟಿ ಸಾಧನೆ