ಶುಕ್ರವಾರ, ಮೇ 7, 2021
26 °C

ಕೋವಿಡ್ ಸಂಕಟ; ಪತ್ನಿಗೆ ಮುತ್ತು ಕೊಟ್ಟ ಸೂರ್ಯ; ಚಿತ್ರ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಶೆಟ್ಟಿಗೆ ಅಂತರ ಕಾಯ್ದುಕೊಂಡೇ ಮುತ್ತು ಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರವೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಪ್ರಸಂಗ ನಡೆದಿತ್ತು.

ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಐಪಿಎಲ್‌ನಲ್ಲಿ ಕಟ್ಟುನಿಟ್ಟಿನ ಬಯೋಬಬಲ್ ವ್ಯವಸ್ಥೆಯನ್ನು ಪಾಲಿಸಲಾಗುತ್ತಿದೆ. ಈ ನಡುವೆ ಗಾಜಿನ ತಡೆಗೋಡೆಯ ಇನ್ನೊಂದು ಬದಿಯಲ್ಲಿರುವ ಪತ್ನಿಗೆ ಮುತ್ತು ಕೊಡುವ ಮೂಲಕ ತಮ್ಮ ಪ್ರೀತಿಯನ್ನು ಹಂಚಿದ್ದಾರೆ.

ಇದನ್ನೂ ಓದಿ: 

ಇಲ್ಲಿ ಐಪಿಎಲ್ ಬಯೋಬಬಲ್ ನಿಯಾಮಾವಳಿಯ ಉಲ್ಲಂಘನೆಯಾಗಿಲ್ಲ. ಪ್ರಸ್ತುತ ಚಿತ್ರವನ್ನು ಮುಂಬೈ ಇಂಡಿಯನ್ಸ್ ಕ್ರಿಕೆಟ್ ಕಾರ್ಯಾಚರಣೆಯ ನಿರ್ದೇಶಕಿ ಸಾಗರಿಕಾ ಘಾಟ್ಕೆ ಇನ್‌ಸ್ಟಾಗ್ರಾಂನಲ್ಲಿ ಹಂಚಿದ್ದಾರೆ.

ಸೂರ್ಯ ಕುಮಾರ್ ಯಾದವ್ ಪತ್ನಿಗೆ ಮುತ್ತು ಕೊಡುತ್ತಿರುವ ದೃಶ್ಯವೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು