ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್ ಗೆಲುವನ್ನು ನೆನಪಿಸಿದ ಧೋನಿ ವಿಂಟೇಜ್ ಸಿಕ್ಸರ್; ಅಭಿಮಾನಿಗಳ ಸಂಭ್ರಮ

Last Updated 1 ಅಕ್ಟೋಬರ್ 2021, 12:17 IST
ಅಕ್ಷರ ಗಾತ್ರ

ಶಾರ್ಜಾ: ಐಪಿಎಲ್‌ನಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿನ ಸಿಕ್ಸರ್ ಬಾರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಗದೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ.

ಕಳಪೆ ಫಾರ್ಮ್‌ ಹಾಗೂ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಧೋನಿ ವಿಮರ್ಶೆಗೆ ಒಳಗಾಗಿದ್ದರು. ಆರಂಭದಲ್ಲಿ ರನ್ ಗಳಿಸಲು ತಡಕಾಡಿದರೂ ಬಳಿಕ ಗೆಲುವಿನ ಸಿಕ್ಸರ್ ಬಾರಿಸುವ ಮೂಲಕ ತಮ್ಮಲ್ಲಿ ಬ್ಯಾಟಿಂಗ್ ಶಕ್ತಿ ಇನ್ನೂ ಬಾಕಿಯಿದೆ ಎಂಬುದನ್ನು ಸಾಬೀತು ಮಾಡಿದರು.

ಇದು ಅಭಿಮಾನಿಗಳಲ್ಲೂ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 2011ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಧೋನಿ ಸಿಕ್ಸರ್ ಎತ್ತುವ ಮೂಲಕ ಭಾರತ 28 ವರ್ಷಗಳ ಬಳಿಕ ಟ್ರೋಫಿ ಜಯಿಸಿತ್ತು.

'ಬೆಸ್ಟ್ ಫಿನಿಶರ್' ಎಂಬ ಬಿರುದಿಗೆ ಪಾತ್ರವಾಗಿರುವ ಧೋನಿ, ಸಿಕ್ಸರ್ ಬಾರಿಸುವ ಮೂಲಕ ಟೀಮ್ ಇಂಡಿಯಾ ಹಾಗೂ ತಮ್ಮ ಐಪಿಎಲ್ ತಂಡವಾದ ಚೆನ್ನೈಗೆ ಅನೇಕ ಸ್ಮರಣೀಯ ಗೆಲುವುಗಳನ್ನು ಒದಗಿಸಿಕೊಟ್ಟಿದ್ದಾರೆ.

ಈಗ 40 ಹರೆಯದಲ್ಲೂ ಮತ್ತದೇ ಸಾಮರ್ಥ್ಯವನ್ನು ಸಾಬೀತು ಮಾಡುವ ಮೂಲಕ ಎದುರಾಳಿಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ-ಆಫ್ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಚೆನ್ನೈ ಪಾತ್ರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT