ಭಾನುವಾರ, ಮೇ 16, 2021
22 °C

IPL 2021: ಫಿಫ್ಟಿ ಸಾಧನೆ ಮಗಳಿಗೆ ಅರ್ಪಿಸಿ ಕೊಹ್ಲಿ ವಿಶಿಷ್ಟ ಸಂಭ್ರಮಾಚರಣೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬಾರಿಸಿದ ಚೊಚ್ಚಲ ಅರ್ಧಶತಕವನ್ನು ಮಗಳು ವಮಿಕಾಗೆ ಅರ್ಪಿಸಿದ್ದಾರೆ.

ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಎಲ್ಲರ ಪ್ರೀತಿಗೆ ಪಾತ್ರವಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಒಡ್ಡಿದ 178 ರನ್ ಗುರಿ ಬೆನ್ನತ್ತಿದ ಆರ್‌ಸಿಬಿ, 16.3 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತ್ತು.

ಅಮೋಘ ಬ್ಯಾಟಿಂಗ್ ಮಾಡಿದ ದೇವದತ್ತ ಪಡಿಕ್ಕಲ್ ಚೊಚ್ಚಲ ಐಪಿಎಲ್ ಶತಕ ಬಾರಿಸಿದ್ದರೆ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಾಧನೆ ಮಾಡಿದ್ದರು.

34 ಎಸೆತಗಳಲ್ಲಿ ಕೊಹ್ಲಿ ಅರ್ಧಶತಕ ಸಾಧನೆ ಮಾಡಿದ್ದರು. ಈ ವೇಳೆ ವಿಶೇಷ ರೀತಿಯಲ್ಲಿ ಸಂಭ್ರಮಾಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಮುದ್ದಿನ ಮಗಳಿಗೆ ಫ್ಲೈಯಿಂಗ್ ಕಿಸ್ ನೀಡಿ ಜೋಗುಳ ಹಾಡಿ ಮುದ್ದಾಡುವಂತೆ ಸಂಕೇತ ಮಾಡುತ್ತಾರೆ. ಈ ವೇಳೆ ಪತ್ನಿ ಅನುಷ್ಕಾ ಶರ್ಮಾ ಸ್ಟೇಡಿಯಂನಲ್ಲಿ ಎದ್ದು ನಿಂತು ಚಪ್ಪಾಳೆ ತಟ್ಟುತ್ತಾರೆ.

ಐಪಿಎಲ್ ಇತಿಹಾಸದಲ್ಲೇ 6,000 ರನ್ ಮೈಲಿಗಲ್ಲು ತಲುಪಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ ಕೊಹ್ಲಿ ಪಾತ್ರವಾಗಿದ್ದಾರೆ. ಅತ್ತ ಪಡಿಕ್ಕಲ್ ಐಪಿಎಲ್‌ನಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದ್ದರು.

ಪಡಿಕ್ಕಲ್ ಹಾಗೂ ಕೊಹ್ಲಿ ಮುರಿಯದ ಮೊದಲ ವಿಕೆಟ್‌ಗೆ 181 ರನ್ ಜೊತೆಯಾಟ ನೀಡಿದ್ದರು. ಇದು ಆರ್‌ಸಿಬಿ ಪರ ಮೊದಲ ವಿಕೆಟ್‌ಗೆ ದಾಖಲಾದ ದಾಖಲೆ ಜೊತೆಯಾಟವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು