ನವದೆಹಲಿ: ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣದ ಆಸನ ಸಾಮರ್ಥ್ಯದ ಶೇ 25ರಷ್ಟು ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

‘ಶನಿವಾರದ ಪಂದ್ಯವು 15ನೇ ಆವೃತ್ತಿಯ ಐಪಿಎಲ್‌ಗೆ ದಿಕ್ಸೂಚಿಯಾಗಲಿದೆ. ಇಂತಹ ಮಹತ್ವದ ಹಣಾಹಣಿಗೆ ಪ್ರೇಕ್ಷಕರಿಗೆ ಅವಕಾಶ ಕೊಡುತ್ತಿರುವುದು ಸಂತಸವಾಗುತ್ತಿದೆ. ಮುಂಬೈ, ನವೀ ಮುಂಬೈ ಮತ್ತು ಪುಣೆಯ ಕ್ರೀಡಾಂಗಣಗಳಲ್ಲಿ ಪಂದ್ಯಗಳು ಆಯೋಜನೆಗೊಳ್ಳಲಿವೆ. ಕೋವಿಡ್ ನಿಯಮಗಳ ಚೌಕಟ್ಟಿನಲ್ಲಿಯೇ ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗುವುದು’ ಎಂದು ಐಪಿಎಲ್ ಆಡಳಿತ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಆವೃತ್ತಿಯಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿವೆ. ವಾಂಖೆಡೆ ಮತ್ತು ಡಿವೈ ಪಾಟೀಲ ಕ್ರೀಡಾಂಗಣಗಳಲ್ಲಿ ತಲಾ 20 ಪಂದ್ಯಗಳು, ಬ್ರೆಬೋರ್ನ್ ಮತ್ತು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ತಲಾ 15 ಪಂದ್ಯಗಳು ನಡೆಯಲಿವೆ.

ಪಂದ್ಯಗಳ ಟಿಕೆಟ್ ಮಾರಾಟವನ್ನು ಬುಧವಾರದಿಂದ ಆರಂಭಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.