ಮಂಗಳವಾರ, ಜೂನ್ 28, 2022
23 °C

IPL 2022: ಐಪಿಎಲ್‌ನಲ್ಲಿ ಅಕ್ಷರ್ ಪಟೇಲ್ 100 ವಿಕೆಟ್ ಸಾಧನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಲ್‌ರೌಂಡರ್ ಅಕ್ಷರ್ ಪಟೇಲ್ 100 ವಿಕೆಟ್ ಸಾಧನೆ ಮಾಡಿದ್ದಾರೆ. 

ಐಪಿಎಲ್ 2022 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಅಕ್ಷರ್, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. 

ಈ ಮೂಲಕ ಐಪಿಎಲ್‌ನಲ್ಲಿ 1000 ರನ್ ಹಾಗೂ 100 ವಿಕೆಟ್ ಗಳಿಸಿದ ನಾಲ್ಕನೇ ಆಟಗಾರ ಎನಿಸಿದ್ದಾರೆ. 

ಐಪಿಎಲ್‌ನಲ್ಲಿ 1000 ರನ್ ಹಾಗೂ 100 ವಿಕೆಟ್ ಸಾಧಕರು:
ಡ್ವೇನ್ ಬ್ರಾವೊ,
ರವೀಂದ್ರ ಜಡೇಜ,
ಸುನಿಲ್ ನಾರಾಯಣ್,
ಅಕ್ಷರ್ ಪಟೇಲ್

120ನೇ ಇನ್ನಿಂಗ್ಸ್‌ನಲ್ಲಿ (121ನೇ ಪಂದ್ಯ) ಅಕ್ಷರ್ 100 ವಿಕೆಟ್ ಸಾಧನೆ ಮಾಡಿದರು. 21 ರನ್ ತೆತ್ತು 4 ವಿಕೆಟ್ ಗಳಿಸಿರುವುದು ಶ್ರೇಷ್ಠ ಸಾಧನೆಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು