ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್‌ನೆಸ್ ಮರಳಿ ಪಡೆದಿದ್ದು, ತಂಡವನ್ನು ಸೇರಿಕೊಂಡಿದ್ದಾರೆ.

ಐಪಿಎಲ್ ನಿಯಮಾವಳಿಗೆ ಅನುಸಾರವಾಗಿ ಸೂರ್ಯಕುಮಾರ್, ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಮುಗಿಸಿದ ಬಳಿಕ ಮುಂಬೈ ಇಂಡಿಯನ್ಸ್ ಬಯೋಬಬಲ್ ಅನ್ನು ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ:IPL 2022 LSG vs CSK: ಚೆನ್ನೈ ವಿರುದ್ಧ ಟಾಸ್ ಗೆದ್ದ ಲಖನೌ ಫೀಲ್ಡಿಂಗ್ ಆಯ್ಕೆ

ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಸೂರ್ಯಕುಮಾರ್ ಲಭ್ಯರಾಗುವ ನಿರೀಕ್ಷೆಯಿದೆ. ಈ ಮೂಲಕ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ.

ಸೂರ್ಯಕುಮಾರ್, ಫೆಬ್ರುವರಿ 20ರಂದು ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಬೆರಳಿಗೆ ಗಾಯಮಾಡಿಕೊಂಡಿದ್ದರು.

ಗಾಯದಿಂದ ಚೇತರಿಸಿಕೊಂಡ ಬಳಿಕ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋಲಿಗೆ ಶರಣಾಗಿತ್ತು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಅನುಪಸ್ಥಿತಿ ಕಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.