ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ಪಾಳಯದಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 22ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ.

ಈ ಕುರಿತು ಬಿಸಿಸಿಐ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ. ಡೆಲ್ಲಿ ಹಾಗೂ ರಾಜಸ್ಥಾನ್ ನಡುವಣ ಪಂದ್ಯವು (ಪಂದ್ಯ ಸಂಖ್ಯೆ 34) ಪುಣೆಯ ಎಂಸಿಎ ಮೈದಾನದಲ್ಲಿ ನಿಗದಿಯಾಗಿತ್ತು. ಆದರೆ ಡೆಲ್ಲಿ ತಂಡದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಡೆಲ್ಲಿ ಹಾಗೂ ರಾಜಸ್ಥಾನ್ ನಡುವಣ ಪಂದ್ಯವನ್ನು ಮುಂಬೈನ ವಾಂಖೆಡೆ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ:IPL 2022: ಯಾಕ್ ಜಗಳ ಆಡ್ತಿಯಾ ಯಾವಾಗ್ಲೂ? - ಪ್ರಸಿದ್ಧ ಕೃಷ್ಣ ಕಾಲೆಳೆದ ರಾಹುಲ್

ಆರನೇ ಕೋವಿಡ್ ಪ್ರಕರಣ ಪತ್ತೆ
ಡೆಲ್ಲಿ ತಂಡದಲ್ಲಿ ಆರನೇ ಕೋವಿಡ್ ಪ್ರಕರಣ ಪತ್ತೆಯಾಗಿದೆ. ನ್ಯೂಜಿಲೆಂಡ್ನ ವಿಕೆಟ್ ಕೀಪರ್, ಬ್ಯಾಟರ್ ಟಿಮ್ ಸೀಫರ್ಟ್ ಅವರ ಆರ್ಟಿ-ಪಿಸಿಆರ್ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ನಡುವೆ ಡೆಲ್ಲಿ ತಂಡದ ಆಟಗಾರರಿಗೆ ಎರಡು ಸುತ್ತಿನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಪಂಜಾಬ್ ವಿರುದ್ಧದ ಇಂದಿನ (ಬುಧವಾರ) ಪಂದ್ಯ ನಿಗದಿಯಂತೆ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

ಈ ಮೊದಲು ಡೆಲ್ಲಿ ಹಾಗೂ ಪಂಜಾಬ್ ನಡುವಣ ಪಂದ್ಯವನ್ನು ಪುಣೆಯಿಂದ ಮುಂಬೈನ ಬೆಬೊರ್ನ್ ಮೈದಾನಕ್ಕೆ ಸ್ಥಳಾಂತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.