ಬುಧವಾರ, ಜುಲೈ 6, 2022
22 °C

IPL 2022 DC vs MI: ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.    

ಮುಂಬೈಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿಕೆಟ್‌ಕೀಪರ್ ರಿಷಭ್ ಪಂತ್ ಡೆಲ್ಲಿ ತಂಡದ ಮುಂದಾಳತ್ವ ವಹಿಸುತ್ತಿದ್ದಾರೆ. ರೋಹಿತ್ ರಾಷ್ಟ್ರೀಯ ತಂಡದ ನಾಯಕತ್ವ ವಹಿಸಿಕೊಂಡ ನಂತರ ಆಡುತ್ತಿರುವ ಮೊದಲ ಐಪಿಎಲ್ ಪಂದ್ಯ ಇದಾಗಿದೆ. 

ಪ್ಲೇಯಿಂಗ್ ಇಲೆವೆನ್: 

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ,  ಅನ್ಮೋಲ್‌ಪ್ರೀತ್ ಸಿಂಗ್, ಕೀರನ್ ಪೊಲಾರ್ಡ್, ಟಿಮ್ ಡೇವಿಡ್, ಡ್ಯಾನಿಯಲ್ ಸ್ಯಾಮ್ಸ್, ಮುರುಗನ್ ಅಶ್ವಿನ್, ಟೈಮಲ್ ಮಿಲ್ಸ್ ಮತ್ತು ಬಾಸಿಲ್ ಥಂಪಿ. 

 ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಟಿಮ್ ಸೀಫರ್ಟ್, ಮನದೀಪ್ ಸಿಂಗ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಖಲೀಲ್ ಅಹಮದ್, ಕುಲ್‌ದೀಪ್ ಯಾದವ್ ಮತ್ತು ಕಮಲೇಶ್ ನಾಗರಕೋಟೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು