ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್ 2022ರಲ್ಲಿ ಜೋಸ್ ಬಟ್ಲರ್ 3ನೇ ಶತಕ ಸಾಧನೆ

Last Updated 22 ಏಪ್ರಿಲ್ 2022, 15:39 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟರ್ ಜೋಸ್ ಬಟ್ಲರ್, ಮೂರನೇಶತಕ ಸಾಧನೆ ಮಾಡಿದ್ದಾರೆ.

ಇದರಲ್ಲಿ ಸತತ ಎರಡನೇ ಶತಕ ಸಾಧನೆಯೂ ಸೇರಿದೆ.

ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಕೇವಲ 57 ಎಸೆತಗಳಲ್ಲಿ ಶತಕ ಗಳಿಸಿದರು.

ಇದೇ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ (100) ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ (103) ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಸಿಡಿಲಬ್ಬರದ ಶತಕ ಬಾರಿಸಿದ್ದರು.

ಒಟ್ಟಾರೆಯಾಗಿ ಇಂಗ್ಲೆಂಡ್ ಮೂಲದ ಬಟ್ಲರ್, ಐಪಿಎಲ್‌ನಲ್ಲಿ ನಾಲ್ಕನೇ ಶತಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT