ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಡಿ ಕಾಕ್ - ರಾಹುಲ್ ದ್ವಿಶತಕ ಜೊತೆಯಾಟದ ದಾಖಲೆ

ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಮುರಿಯದ ಮೊದಲ ವಿಕೆಟ್‌ಗೆ 210 ರನ್ ಪೇರಿಸಿ ನೂತನ ದಾಖಲೆ ನಿರ್ಮಿಸಿದ್ದಾರೆ.

ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡಿ ಕಾಕ್ ಹಾಗೂ ರಾಹುಲ್ ಜೋಡಿ ಮೊದಲ ವಿಕೆಟ್‌ಗೆ 210 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾಗಿ ಅಬ್ಬರಿಸಿದರು.

ಇದು ಐಪಿಎಲ್ ಇತಿಹಾಸದಲ್ಲೇ ಮೊದಲ ವಿಕೆಟ್‌ಗೆ ದಾಖಲಾದ ಗರಿಷ್ಠ ಜೊತೆಯಾಟದ ದಾಖಲೆಯಾಗಿದೆ.

ಹಾಗೆಯೇ ಒಂದೇ ಒಂದು ವಿಕೆಟ್ ಕಳೆದುಕೊಳ್ಳದೇ ಸಂಪೂರ್ಣ 20 ಓವರ್‌ ಬ್ಯಾಟಿಂಗ್ ಮಾಡಿದ ದಾಖಲೆಗೆ ಲಖನೌ ಪಾತ್ರವಾಗಿದೆ.

ಇನ್ನು ಯಾವುದೇ ವಿಕೆಟ್‌ಗೆ ದಾಖಲಾದ ಮೂರನೇ ಗರಿಷ್ಠ ಜೊತೆಯಾಟದ ದಾಖಲೆ ಇದಾಗಿದೆ. 2016ರಲ್ಲಿ ಆರ್‌ಸಿಬಿಯ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ 229 ರನ್‌ಗಳ ಜೊತೆಯಾಟ ಕಟ್ಟಿದ್ದರು.

70 ಎಸೆತಗಳನ್ನು ಎದುರಿಸಿದ ಡಿ ಕಾಕ್ ತಲಾ 10 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 140 ರನ್ ಗಳಿಸಿ ಔಟಾಗದೆ ಉಳಿದರು.

ಈ ಮೂಲಕ ಐಪಿಎಲ್ ಇನ್ನಿಂಗ್ಸ್‌ವೊಂದರಲ್ಲಿ ಮೂರನೇ ಗರಿಷ್ಠ ವೈಯಕ್ತಿಕ ರನ್ ದಾಖಲಿಸಿದ ಗೌರವಕ್ಕೆ ಪಾತ್ರರಾದರು. ಈ ಪಟ್ಟಿಯಲ್ಲಿ ಮುನ್ನಡೆಯಲ್ಲಿರುವ ಕ್ರಿಸ್ ಗೇಲ್, 2013ರಲ್ಲಿ ಅಜೇಯ 175 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ಡಿ ಕಾಕ್, ಎರಡನೇ ಶತಕದ ಸಾಧನೆ ಮಾಡಿದರು.

ಡಿ ಕಾಕ್‌ಗೆ ತಕ್ಕ ಸಾಥ್ ನೀಡಿದ ರಾಹುಲ್ 51 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 68 ರನ್ ಗಳಿಸಿ ಅಜೇಯರಾಗುಳಿದರು. ಈ ಮೂಲಕ ಐಪಿಎಲ್‌ನಲ್ಲಿ ಸತತ ಮೂರನೇ ಬಾರಿಗೆ 500ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT