ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಎಡಗೈ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 4,000 ರನ್‌ಗಳ ಸಾಧನೆ ಮಾಡಿದ್ದಾರೆ.
ಐಪಿಎಲ್ 2022 ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿರುವ ಪಂತ್, ಬುಧವಾರ ಡಿ.ವೈ. ಪಾಟೀಲ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು.
ಕೊನೆಯ ಹಂತದಲ್ಲಿ ಕ್ರೀಸಿಗಿಳಿದಿದ್ದ ಪಂತ್ ಕೇವಲ ನಾಲ್ಕು ಎಸೆತಗಳಲ್ಲಿ ಎರಡು ಸಿಕ್ಸರ್ ಸೇರಿದಂತೆ 13 ರನ್ ಗಳಿಸಿ ಔಟಾಗದೆ ಉಳಿದರು.
ಚುಟುಕು ಮಾದರಿಯಲ್ಲಿ 154 ಪಂದ್ಯಗಳಲ್ಲಿ ಪಂತ್ 33.09ರ ಸರಾಸರಿಯಲ್ಲಿ ಒಟ್ಟು 4004 ರನ್ ಗಳಿಸಿದ್ದಾರೆ. ಪಂತ್ 146.55ರ ಸ್ಟ್ರೈಕ್‌ರೇಟ್ ಕಾಪಾಡಿಕೊಂಡಿದ್ದು, 22 ಅರ್ಧಶತಕಗಳನ್ನು ಹೊಂದಿದ್ದಾರೆ.
ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಂಟು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಡೆಲ್ಲಿ, ಪ್ಲೇ-ಆಫ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದೆ. ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ ತಲಾ ಆರು ಗೆಲುವು ಹಾಗೂ ಸೋಲಿನೊಂದಿಗೆ ಒಟ್ಟು 12 ಅಂಕ ಗಳಿಸಿದ್ದು, ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.