ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್‌ಗೆ ₹ 12 ಲಕ್ಷ ದಂಡ

Last Updated 8 ಏಪ್ರಿಲ್ 2022, 9:27 IST
ಅಕ್ಷರ ಗಾತ್ರ

ಮುಂಬೈ: ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ ಗುರುವಾರ ರಾತ್ರಿ ನಡೆದ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಭ್‌ ಪಂತ್‌ ಅವರಿಗೆ ದಂಡ ವಿಧಿಸಲಾಗಿದೆ.

ಐಪಿಎಲ್‌ ನೀತಿ ಸಂಹಿತೆ ಪ್ರಕಾರ ಡೆಲ್ಲಿ ತಂಡ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಪಂತ್‌ಗೆ ₹ 12 ಲಕ್ಷ ದಂಡ ಹಾಕಲಾಗಿದೆ.

ಇಲ್ಲಿನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡ ನಿಗದಿತ 20 ಓವರ್‌ಗಳಲ್ಲಿ149 ರನ್ ಗಳಿಸಿತ್ತು. ಲಖನೌ ತಂಡ ಈ ಗುರಿಯನ್ನು ಕೇವಲ ನಾಲ್ಕು ವಿಕೆಟ್‌ ಕಳೆದುಕೊಂಡು ಇನ್ನೂ 2 ಎಸೆತ ಬಾಕಿ ಇರುವಂತೆಯೇ ಮುಟ್ಟಿತು.

ಇದರೊಂದಿಗೆ ಲಖನೌ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಜಯ ಸಾಧಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಮೂರು ಪಂದ್ಯಗಳಿಂದ ಕೇವಲ 1 ಜಯ ಕಂಡಿರುವ ಡೆಲ್ಲಿ ಎರಡು ಪಾಯಿಂಟ್‌ಗಳೊಂದಿಗೆ 7ನೇ ಸ್ಥಾನದಲ್ಲಿದೆ.

ಬುಧವಾರ ರಾತ್ರಿ ನಡೆದಕೋಲ್ಕತ್ತ ನೈಟ್‌ ರೈಡರ್ಸ್‌ ಹಾಗೂಮುಂಬೈ ಇಂಡಿಯನ್ಸ್‌ ಪಂದ್ಯದ ವೇಳೆಯೂ ಐಪಿಎಲ್‌ ನಿಯಮ ಉಲ್ಲಂಘನೆ ಪ್ರಕರಣ ವರದಿಯಾಗಿತ್ತು.ಕೋಲ್ಕತ್ತದ ನಿತೀಶ್‌ ರಾಣಾ ಅವರಿಗೆಪಂದ್ಯದ ಸಂಭಾವನೆಯ ಶೇ 10 ರಷ್ಟು ದಂಡ ಮತ್ತು ಮುಂಬೈ ವೇಗಿ ಜಸ್‌ಪ್ರೀತ್‌ ಬೂಮ್ರಾ ಅವರಿಗೆ ಎಚ್ಚರಿಕೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT