ಬುಧವಾರ, ಮಾರ್ಚ್ 22, 2023
32 °C

ಐಪಿಎಲ್ ಫೈನಲ್ ಪಂದ್ಯ ರಾತ್ರಿ 8 ಗಂಟೆಗೆ ಆರಂಭ: ವರದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ ಎಂದು ವರದಿಯಾಗಿದೆ.

ಸಮಾರೋಪ ಸಮಾರಂಭದ ಕಾರ್ಯಕ್ರಮ ಆಯೋಜನೆಯಾಗುವ ಹಿನ್ನೆಲೆಯಲ್ಲಿ ಐಪಿಎಲ್ ಫೈನಲ್ ಪಂದ್ಯವು ಅರ್ಧ ತಾಸು ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 

'ಕ್ರಿಕ್‌ಬಜ್' ವರದಿ ಪ್ರಕಾರ ಬಾಲಿವುಡ್ ಸೆಲೆಬ್ರಿಟಿಗಳನ್ನು ಒಳಗೊಂಡ ಸಮಾರೋಪ ಸಮಾರಂಭವು ರಾತ್ರಿ 6.30ಕ್ಕೆ ಆರಂಭವಾಗಲಿದ್ದು, 50 ನಿಮಿಷಗಳ ಕಾಲ ನಡೆಯಲಿದೆ.

ಹಾಗಾಗಿ ಐಪಿಎಲ್ ಫೈನಲ್ ಟಾಸ್ 7.30ಕ್ಕೆ ನಡೆಯಲಿದ್ದು, ಪಂದ್ಯ 8.00ಕ್ಕೆ ಸರಿಯಾಗಿ ಆರಂಭವಾಗಲಿದೆ.

ಐಪಿಎಲ್ ಫೈನಲ್ ಪಂದ್ಯವು ಮೇ 29, ಭಾನುವಾರದಂದು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಲೀಗ್ ಹಂತದ ಪಂದ್ಯಗಳು ರಾತ್ರಿ 7.30ಕ್ಕೆ ಆರಂಭವಾಗಿದೆ. ಪ್ಲೇ-ಆಫ್ ಪಂದ್ಯಗಳ ಸಮಯದಲ್ಲೂ ಬದಲಾವಣೆಗಳಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು