ಬುಧವಾರ, ಜೂನ್ 29, 2022
26 °C
ಈಡನ್ ಗಾರ್ಡನ್‌ನಲ್ಲಿ ಮೊದಲ ಕ್ವಾಲಿಫೈಯರ್ ಇಂದು; ರಶೀದ್ –ಚಾಹಲ್ ಮುಖಾಮುಖಿ

IPL 2022 | GT vs RR: ಅನುಭವಿ ರಾಜಸ್ಥಾನ ಹೊಸ ಟೈಟನ್ಸ್‌ ಸವಾಲು

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್‌ ತಂಡ ಇದೇ ಮೊದಲ ಬಾರಿ ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುತ್ತಿದೆ.

ಇದೀಗ ಲೀಗ್ ಹಂತದಲ್ಲಿ ಅಗ್ರಸ್ಥಾನ ಗಳಿಸಿ ಪ್ಲೇ ಆಫ್‌ಗೆ ಪ್ರವೇಶಿಸಿದೆ. ಈಡನ್‌ ಗಾರ್ಡನ್‌ನಲ್ಲಿ ಮಂಗಳವಾರ ನಡೆಯಲಿರುವ ಮೊದಲ ಕ್ವಾಲಿಫೈಯರ್‌ನಲ್ಲಿ ಗುಜರಾತ್ ತಂಡವು ರಾಜಸ್ಥಾನ ರಾಯಲ್ಸ್ ಎದುರು ಸೆಣಸಲಿದೆ.

ಅಂಕಪಟ್ಟಿಯಲ್ಲಿ ಗುಜರಾತ್ ಮೊದಲ ಮತ್ತು ರಾಯಲ್ಸ್‌ ಎರಡನೇ ಸ್ಥಾನ ಪಡೆದಿವೆ. ಆದರೆ, ಆಟಗಾರರ ಸಾಮರ್ಥ್ಯವನ್ನು ನೋಡಿದರೆ ಸಮಬಲಶಾಲಿಗಳಂತೆ ಕಾಣುತ್ತಿವೆ. ಉಭಯ ತಂಡಗಳ ನಾಯಕರಾದ ಹಾರ್ದಿಕ್ ಮತ್ತು ಸಂಜು ಸ್ಯಾಮ್ಸನ್ ಬ್ಯಾಟಿಂಗ್‌ನಲ್ಲಿಯೂ ಉಪಯುಕ್ತ ಕಾಣಿಕೆ ನೀಡಿದ್ದಾರೆ. ಗುಜರಾತ್ ಅರಂಭಿಕ ಶುಭಮನ್ ಗಿಲ್ ಮತ್ತು ರಾಜಸ್ಥಾನದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಕೂಡ ಲಯದಲ್ಲಿದ್ದಾರೆ. ಬಟ್ಲರ್ ಈ ಟೂರ್ನಿಯಲ್ಲಿ ಮೂರು ಶತಕ ದಾಖಲಿಸಿದ್ದಾರೆ. 

ಗುಜರಾತ್ ತಂಡದ ಸ್ಪಿನ್ನರ್ ರಶೀದ್ ಖಾನ್ ಮತ್ತು ರಾಯಲ್ಸ್‌ನ ಯಜುವೇಂದ್ರ ಚಾಹಲ್ ಅವರ ನಡುವಿನ ಹಣಾಹಣಿಗೆ ಈ ಪಂದ್ಯ ವೇದಿಕೆಯಾಗಲಿದೆ. ಇಬ್ಬರು ಪಂದ್ಯ ಜಯಿಸಿ ಕೊಡುವ ಸಮರ್ಥ ಸ್ಪಿನ್ನರ್‌ಗಳಾಗಿದ್ದಾರೆ.  ಮೊಹಮ್ಮದ್ ಶಮಿ ಮತ್ತು ಪ್ರಸಿದ್ಧ ಕೃಷ್ಣ ಕೂಡ ಪೈಪೋಟಿ ನಡೆಸುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು. ರಾಜಸ್ಥಾನ ತಂಡದಲ್ಲಿ ರಿಯಾನ್ ಪರಾಗ್ ಮತ್ತು ಟೈಟನ್ಸ್‌ನ ರಾಹುಲ್ ತೆವಾಟಿಯಾ ಮಧ್ಯೆ ಸಿಕ್ಸರ್‌ ಸಿಡಿಸುವ ಪೈಪೋಟಿ ನಡೆಯುವ ನಿರೀಕ್ಷೆಯೂ ಇದೆ. 

ಈ ಪಂದ್ಯದಲ್ಲಿ ಜಯಿಸಿದವರು ನೇರವಾಗಿ ಫೈನಲ್ ಪ್ರವೇಶಿಸುವರು. ಸೋತವರು ಎರಡನೇ ಕ್ವಾಲಿಫೈಯರ್ ಆಡಲಿದ್ದಾರೆ. ಆದ್ದರಿಂದ ಎರಡೂ ತಂಡಗಳು ಗೆಲುವಿಗಾಗಿ ಸಂಪೂರ್ಣ ಸಾಮರ್ಥ್ಯ ಪಣಕ್ಕೊಡ್ಡುವ ಛಲದಲ್ಲಿವೆ. ಲೀಗ್ ಹಂತದಲ್ಲಿ ಉಭಯ ತಂಡಗಳು ಒಂದು ಬಾರಿ ಮುಖಾಮುಖಿಯಾಗಿದ್ದವು. ಗುಜರಾತ್ ಜಯಿಸಿತ್ತು.

ತಂಡಗಳು
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ (ನಾಯಕ), ಡೇವಿಡ್ ಮಿಲ್ಲರ್, ಶುಭಮನ್ ಗಿಲ್,  ಆಭಿನವ್ ಮನೋಹರ್, ರಾಹುಲ್ ತೇವಾಟಿಯಾ, ಸಾಯಿಸುದರ್ಶನ್, ವಿಜಯಶಂಕರ್, ವೃದ್ಧಿಮಾನ್ ಸಹಾ, ಅಲ್ಜರಿ ಜೋಸೆಫ್, ದರ್ಶನ್ ನಾಯ್ಕಂಡೆ, ಲಾಕಿ ಫರ್ಗ್ಯುಸನ್, ಮೊಹಮ್ಮದ್ ಶಮಿ, ಪ್ರದೀಪ್ ಸಂಗ್ವಾನ್, ರಶೀದ್ ಖಾನ್, ವರುಣ್ ಆ್ಯರನ್, ಯಶ್ ದಯಾಳ್, ರೆಹಮಾನುಲ್ಲಾ ಗುರ್ಬಾಜ್. 

ರಾಜಸ್ಥಾನ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರೊನ್ ಹೆಟ್ಮೆಯರ್, ದೇವದತ್ತ ಪಡಿಕ್ಕಲ್, ಪ್ರಸಿದ್ಧ ಕೃಷ್ಣ, ಯಜುವೇಂದ್ರ ಚಾಹಲ್, ರಿಯಾನ್ ಪರಾಗ್, ಕೆ.ಸಿ. ಕಾರ್ಯಪ್ಪ, ನವದೀಪ್ ಸೈನಿ, ಕುಲದೀಪ್ ಸೇನ್, ಕರುಣ್ ನಾಯರ್, ಕುಲದೀಪ್ ಯಾದವ್, ಜೇಮ್ಸ್ ನಿಶಾಮ್, ಡೆರಿಲ್ ಮಿಚೆಲ್

ಪಂದ್ಯ ಆರಂಭ: ರಾತ್ರಿ 7.30
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಹಾಟ್‌ಸ್ಟಾರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು