IPL 2022 | ಬಟ್ಲರ್ ಭರ್ಜರಿ ಬ್ಯಾಟಿಂಗ್; ಗುಜರಾತ್ ಗೆಲುವಿಗೆ 189 ರನ್ ಗುರಿ

ಕೋಲ್ಕತ್ತ: ಜೋಸ್ ಬಟ್ಲರ್ ಉತ್ತಮ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡವು ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.
ಕೋಲ್ಕತ್ತದ ಈಡನ್ ಗಾರ್ಡನ್ನಲ್ಲಿ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ಸ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿದೆ.
ಜೋಸ್ ಬಟ್ಲರ್ 89, ಸಂಜು ಸ್ಯಾಮ್ಸನ್ 47, ದೇವದತ್ತ ಪಡಿಕ್ಕಲ್ 28 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಇತ್ತ ಗುಜರಾತ್ ಪರ ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಆರ್.ಸಾಯಿ ಕಿಶೋರ್ ಹಾಗೂ ಯಶ್ ದಯಾಳ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
𝗜𝗻𝗻𝗶𝗻𝗴𝘀 𝗕𝗿𝗲𝗮𝗸!@josbuttler's 89 & Captain @IamSanjuSamson's 47 power @rajasthanroyals to 188/6. 👏 👏
The @gujarat_titans chase to commence soon. 👍 👍
Scorecard ▶️ https://t.co/O3T1ww9yVk#TATAIPL | #GTvRR pic.twitter.com/2JDqyDQSLX
— IndianPremierLeague (@IPL) May 24, 2022
ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ಇದೇ ಮೊದಲ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುತ್ತಿದೆ. ಇದೀಗ ಲೀಗ್ ಹಂತದಲ್ಲಿ ಅಗ್ರಸ್ಥಾನ ಗಳಿಸಿ ಪ್ಲೇ ಆಫ್ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಜಯಿಸಿದವರು ನೇರವಾಗಿ ಫೈನಲ್ ಪ್ರವೇಶಿಸುವರು. ಸೋತವರು ಎರಡನೇ ಕ್ವಾಲಿಫೈಯರ್ ಆಡಲಿದ್ದಾರೆ.
ಲೀಗ್ ಹಂತದಲ್ಲಿ ಉಭಯ ತಂಡಗಳು ಒಂದು ಬಾರಿ ಮುಖಾಮುಖಿಯಾಗಿದ್ದವು. ಗುಜರಾತ್ ಜಯಿಸಿತ್ತು.
ಅಂಕಪಟ್ಟಿಯಲ್ಲಿ ಗುಜರಾತ್ ಮೊದಲ ಮತ್ತು ರಾಯಲ್ಸ್ ಎರಡನೇ ಸ್ಥಾನ ಪಡೆದಿವೆ. ಆದರೆ, ಆಟಗಾರರ ಸಾಮರ್ಥ್ಯವನ್ನು ನೋಡಿದರೆ ಸಮಬಲಶಾಲಿಗಳಂತೆ ಕಾಣುತ್ತಿವೆ. ಉಭಯ ತಂಡಗಳ ನಾಯಕರಾದ ಹಾರ್ದಿಕ್ ಮತ್ತು ಸಂಜು ಸ್ಯಾಮ್ಸನ್ ಬ್ಯಾಟಿಂಗ್ನಲ್ಲಿಯೂ ಉಪಯುಕ್ತ ಕಾಣಿಕೆ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.