ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಾಹುಲ್ ಜೊತೆಗಿನ ಚಿತ್ರ ಹಂಚಿದ ನಟಿ ಅಥಿಯಾ

Last Updated 18 ಏಪ್ರಿಲ್ 2022, 12:40 IST
ಅಕ್ಷರ ಗಾತ್ರ

ಮುಂಬೈ: 30ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಬಾಯ್‌ಫ್ರೆಂಡ್ ಕೆ.ಎಲ್. ರಾಹುಲ್ ಅವರೊಂದಿಗಿನ ರೊಮ್ಯಾಂಟಿಕ್ ಚಿತ್ರಗಳನ್ನು ನಟಿ ಅಥಿಯಾ ಶೆಟ್ಟಿ ಹಂಚಿದ್ದಾರೆ.

'ಎಲ್ಲೇ ಆದರೂನಿಮ್ಮೊಂದಿಗೆ' ಎಂಬ ಅಡಿಬರಹದೊಂದಿಗೆ ಇನ್‌ಸ್ಟಾಗ್ರಾಂನಲ್ಲಿ ಚಿತ್ರ ಪೋಸ್ಟ್ ಮಾಡಿರುವಅಥಿಯಾ, ರಾಹುಲ್‌ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಇದಕ್ಕೆ ಪ್ರತಿಯಾಗಿ ರಾಹುಲ್ 'ಲವ್ ಯೂ' ಎಂದು ಕಾಮೆಂಟಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್, ಇಂಡಿಯನ್ ಪ್ರೀಮಿಯರ್ ಲೀಗ್‌2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಹೊಸದಾಗಿ ಪದಾರ್ಪಣೆ ಮಾಡಿರುವ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

100ನೇ ಐಪಿಎಲ್ ಪಂದ್ಯದಲ್ಲಿ ಶತಕ ಸಾಧನೆ ಮಾಡಿದ್ದ ರಾಹುಲ್, ವಿಶೇಷ ಸಾಧನೆ ಮಾಡಿದ್ದರು.

ಪ್ರಸ್ತುತ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ರಾಹುಲ್ ಅವರಿಗೆ ಕ್ರಿಕೆಟ್ ಲೋಕದ ಪ್ರಮುಖರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಸಂದೇಶಗಳು ಹರಿದು ಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT