ಮಂಗಳವಾರ, ಜೂನ್ 28, 2022
25 °C

4 ಬಾರಿ ಐಪಿಎಲ್‌ ಫೈನಲ್ ಗೆದ್ದಿರುವ ಹಾರ್ದಿಕ್‌ಗೆ ಈ ಬಾರಿ ಯಶಸ್ಸು ಸಿಗಬಹುದೇ?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಐದನೇ ಬಾರಿಗೆ ಫೈನಲ್ ಆಡುವ ಅದೃಷ್ಟ ಒಲಿದು ಬಂದಿದೆ.

ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ಪಾಂಡ್ಯ, ನಾಲ್ಕು ಸಲ ಫೈನಲ್ ಆಡಿದ್ದರು. ಅಲ್ಲದೆ ಎಲ್ಲ ನಾಲ್ಕು ಬಾರಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: 

ಈಗ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಆಡುತ್ತಿರುವ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಅವರಿಗೆ ಐದನೇ ಪ್ರಯತ್ನದಲ್ಲಿ ಗೆಲುವು ಸಿಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.

 

 

 

ಹಾರ್ದಿಕ್ ಪಾಂಡ್ಯ, 2015 ಹಾಗೂ 2019 ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2017ರಲ್ಲಿ ಪುಣೆ ಸೂಪರ್ ಜೈಂಟ್ಸ್ ಮತ್ತು 2020ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿ ಚಾಂಪಿಯನ್ ಆಗಿದ್ದ ಮುಂಬೈ ತಂಡದ ಸದಸ್ಯರಾಗಿದ್ದರು.

 

ಐಪಿಎಲ್ 2022ರಲ್ಲಿ ಪ್ಲೇ-ಆಫ್ ಹಂತದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಗುಜರಾತ್ ಟೈಟನ್ಸ್ ಫೈನಲ್‌ಗೆ ಪ್ರವೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು