ಮುಂಬೈ: ದೀಪಕ್ ಹೂಡಾ (55) ಹಾಗೂ ಆಯುಷ್ ಬದೋನಿ (54) ಆಕರ್ಷಕ ಅರ್ಧಶತಕಗಳ ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 20 ಓವರ್ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 158 ರನ್ಗಳ ಸವಾಲಿನ ಮೊತ್ತ ಪೇರಿಸಿದೆ.

ಗುಜರಾತ್ ಪರ ಮೊಹಮ್ಮದ್ ಶಮಿ ಮೂರು ವಿಕೆಟ್ ಕಬಳಿಸಿ ಮಿಂಚಿದರು.

ಇದನ್ನೂ ಓದಿ:IPL 2022 GT vs LSG: ಅದ್ಭುತ ಕ್ಯಾಚ್ ಹಿಡಿದ ಸೂಪರ್ಮ್ಯಾನ್ ಗಿಲ್

ಇತ್ತಂಡಗಳ ಪಾಲಿಗೂ ಇದು ಚೊಚ್ಚಲ ಐಪಿಎಲ್ ಪಂದ್ಯವಾಗಿದೆ. ಇನ್ನಿಂಗ್ಸ್ನ ಮೊದಲ ಎಸೆತದಲ್ಲೇ ಲಖನೌ ನಾಯಕ ಕೆ.ಎಲ್ ರಾಹುಲ್ ಅವರನ್ನು ಮೊಹಮ್ಮದ್ ಶಮಿ ಶೂನ್ಯಕ್ಕೆ ಔಟ್ ಮಾಡಿದರು. ಇಲ್ಲಿಗೆ ಶಮಿ ಪರಾಕ್ರಮ ಮುಗಿಯಲಿಲ್ಲ.

ಪವರ್-ಪ್ಲೇನಲ್ಲೇ ಕ್ವಿಂಟನ್ ಡಿ ಕಾಕ್ (7) ಹಾಗೂ ಮನೀಷ್ ಪಾಂಡೆ (6) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಎವಿನ್ ಲೂಯಿಸ್ (10) ಸಹ ಪೆವಿಲಿಯನ್ ಸೇರುವುದರೊಂದಿಗೆ 29 ರನ್ನಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಜೊತೆಗೂಡಿದ ದೀಪಕ್ ಹೂಡಾ ಹಾಗೂ ಆಯುಷ್ ಬದೋನಿ ಐದನೇ ವಿಕೆಟ್ಗೆ 87 ರನ್ಗಳ ಜೊತೆಯಾಟದಲ್ಲಿ ಭಾಗಿಯಾದರು. ಕೌಂಟರ್ ಅಟ್ಯಾಕ್ ಮಾಡಿದ ದೀಪಕ್ ಕೇವಲ 36 ಎಸೆತಗಳಲ್ಲಿ ಅರ್ಧಶತಕ ಸಾಧನೆ ಮಾಡಿದರು.

ಅಂತಿಮವಾಗಿ ರಶೀದ್ ಖಾನ್ ದಾಳಿಯಲ್ಲಿ ವಿಕೆಟ್ ಒಪ್ಪಿಸಿದರು. 41 ಎಸೆತಗಳನ್ನು ಎದುರಿಸಿದ ಹೂಡಾ 55 ರನ್ (6 ಬೌಂಡರಿ, 2 ಸಿಕ್ಸರ್) ಗಳಿಸಿದರು.

ಅತ್ತ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲೇ 38 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಬದೋನಿ, ಉಜ್ವಲ ಭವಿಷ್ಯವನ್ನು ಸಾರಿದರು. ಅಲ್ಲದೆ ಆರನೇ ವಿಕೆಟ್ಗೆ ಕೃಣಾಲ್ ಪಾಂಡ್ಯ (21*) ಜೊತೆಗೂ 40 ರನ್ಗಳ ಜೊತೆಯಾಟದಲ್ಲಿ ಭಾಗಿಯಾದರು.

ಈ ಮೂಲಕ ಲಖನೌ 158 ರನ್ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. 41 ಎಸೆತಗಳನ್ನು ಎದುರಿಸಿದ ಬದೋನಿ ನಾಲ್ಕು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.