ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಲಖನೌ ತಂಡವನ್ನು ಮುನ್ನಡೆಸಲಿದ್ದಾರೆ ಕನ್ನಡಿಗ ಕೆ.ಎಲ್.ರಾಹುಲ್

Last Updated 18 ಜನವರಿ 2022, 11:23 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಹೊಸದಾಗಿ ಪ್ರತಿನಿಧಿಸಲಿರುವ ಲಖನೌ ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಫೆಬ್ರುವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

ರಾಹುಲ್‌, ರವಿ ಬಿಷ್ಣೋಯಿ ಸೇರಿದಂತೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಾರ್ಕಸ್‌ ಸ್ಟೋಯಿನಿಸ್ ಅವರು ಲಖನೌ ತಂಡ ಸೇರುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ಆವೃತ್ತಿಗಳಿಂದ ರಾಹುಲ್, ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದರು. ಆದರೆ, ಫ್ರಾಂಚೈಸಿ ರಾಹುಲ್‌ ಅವರನ್ನು ಉಳಿಸಿಕೊಂಡಿಲ್ಲ. ಸ್ಟೋಯಿನಿಸ್‌ ಡೆಲ್ಲಿ ಕ್ಯಾಪಿಟಲ್ಸ್ ಪ್ರತಿನಿಧಿಸಿದರೆ, ಇತ್ತ ರವಿ ಬಿಷ್ಣೋಯಿ ಪಂಜಾಬ್ ತಂಡದ ಪರ ಆಡಿದ್ದರು.

2016 ಮತ್ತು 17ರಲ್ಲಿ ಐಪಿಎಲ್‌ನ ಪುಣೆ ಸೂಪರ್‌ಜಿಯಂಟ್ ತಂಡದ ಫ್ರಾಂಚೈಸಿ ಪಡೆದಿದ್ದ ಕೋಲ್ಕತ್ತ ಮೂಲದ ಆರ್‌ಪಿಎಸ್‌ಜಿ ಗ್ರೂಪ್ ಕಂಪನಿಯು ಈ ಬಾರಿ ₹ 7,090 ಕೋಟಿಯ ಭಾರಿ ಮೊತ್ತಕ್ಕೆ ಲಖನೌ ಫ್ರಾಂಚೈಸಿ ಪಡೆದುಕೊಂಡಿದೆ.

ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರು ಲಖನೌ ಐಪಿಎಲ್ ತಂಡದ ಸಲಹೆಗಾರರಾಗಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಸದ್ಯ ಗಾಯಗೊಂಡಿರುವ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್‌.ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT