ಬುಧವಾರ, ಮೇ 25, 2022
29 °C

117 ಮೀಟರ್ ದೂರ ಸಿಕ್ಸರ್ ಸಿಡಿಸಿ ಅಬ್ಬರಿಸಿದ ಲಿವಿಂಗ್‌ಸ್ಟೋನ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ 117 ಮೀಟರ್ ದೂರ ಸಿಕ್ಸರ್ ಬಾರಿಸುವ ಮೂಲಕ ಲಿಯಾಮ್ ಲಿವಿಂಗ್‌ಸ್ಟೋನ್ ಅಬ್ಬರಿಸಿದ್ದಾರೆ.

ಇದು ಪ್ರಸಕ್ತ ಸಾಲಿನ ಐಪಿಎಲ್‌ನ ಅತಿ ದೊಡ್ಡ ಸಿಕ್ಸರ್ ಆಗಿದೆ.

ಇದನ್ನೂ ಓದಿ: 

ಐಪಿಎಲ್‌ 2022 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಲಿವಿಂಗ್‌ಸ್ಟೋನ್, ಮಂಗಳವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

 

 

 

144 ರನ್ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ 15 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿತ್ತು. ಚೆಂಡು ಮೊಹಮ್ಮದ್ ಶಮಿ ಕೈಯಲಿತ್ತು. ಆದರೆ ಶಮಿ ಅವರ ಒಂದೇ ಓವರ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಹಾಗೂ ಎರಡು ಬೌಂಡರಿ ಸಿಡಿಸಿದ ಲಿವಿಂಗ್‌ಸ್ಟೋನ್, 28 ರನ್ ಗಳಿಸಿದರು. ಈ ಮೂಲಕ 16 ಓವರ್‌ಗಳಲ್ಲೇ ತಂಡವನ್ನು ಗೆಲುವಿನ ದಡ ಸೇರಿಸಿದರು.

 

ಕೇವಲ 10 ಎಸೆತಗಳನ್ನು ಎದುರಿಸಿದ ಲಿವಿಂಗ್‌ಸ್ಟೋನ್ 30 ರನ್ ಗಳಿಸಿ ಔಟಾಗದೆ ಉಳಿದರು. ಈ ಮೂಲಕ ಇನ್ನೂ ನಾಲ್ಕು ಓವರ್‌ಗಳು ಬಾಕಿ ಉಳಿದಿರುವಂತೆಯೇ ಎರಡು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಶಿಖರ್ ಧವನ್ 53 ಎಸೆತಗಳಲ್ಲಿ 61 ರನ್ ಗಳಿಸಿ (8 ಬೌಂಡರಿ, 1 ಸಿಕ್ಸರ್) ಔಟಾಗದೆ ಉಳಿದರು.

 

 

 

 

 

 

 

 

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು