ಸೋಮವಾರ, ಜನವರಿ 17, 2022
18 °C

IPL 2022: ಏಪ್ರಿಲ್ 2ರಂದು ಚೆನ್ನೈಯಲ್ಲಿ ಟೂರ್ನಿ ಆರಂಭ ಸಾಧ್ಯತೆ – ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಡಿಯನ್‌ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ 15ನೇ ಆವೃತ್ತಿಯು ಏಪ್ರಿಲ್ 2ರಂದು ಚೆನ್ನೈಯಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಪಂದ್ಯಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಆದರೆ ಏಪ್ರಿ 2ರಂದು ಚೆನ್ನೈಯಲ್ಲಿ ಟೂರ್ನಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಪಾಲುದಾರರಿಗೆ ಈಗಾಗಲೇ ಮಾಹಿತಿ ನೀಡಿರುವುದಾಗಿ ‘ಕ್ರಿಕ್‌ಬಜ್’ ವರದಿ ಮಾಡಿದೆ.

ಓದಿ: 

15ನೇ ಆವೃತ್ತಿಯ ಐಪಿಎಲ್‌ನಲ್ಲಿ 10 ತಂಡಗಳು ಆಡಲಿದ್ದು, ಒಟ್ಟು 74 ಪಂದ್ಯಗಳು ನಡೆಯಲಿವೆ. ಒಟ್ಟು 60 ದಿನಗಳ ಕಾಲ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಆಂತರಿಕ ಸಭೆಯಲ್ಲಿ ಚರ್ಚಿಸಿದೆ ಎನ್ನಲಾಗಿದೆ. ಈ ಲೆಕ್ಕಾಚಾರದ ಪ್ರಕಾರ, ಜೂನ್ ಮೊದಲ ವಾರಾಂತ್ಯದಲ್ಲಿ ಫೈನಲ್ ಪಂದ್ಯ ನಡೆಯುವ ನಿರೀಕ್ಷೆ ಇದೆ.

ಮುಂದಿನ ಐಪಿಎಲ್ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇತ್ತೀಚೆಗೆ ಸ್ಪಷ್ಟಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು