ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಮುಂಬೈ ವಿರುದ್ಧ ರಾಹುಲ್ ಕ್ಲಾಸ್ ಆಟ; ಅಮೋಘ ಶತಕ ಸಾಧನೆ

Last Updated 24 ಏಪ್ರಿಲ್ 2022, 15:59 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೆ.ಎಲ್. ರಾಹುಲ್ ಎರಡನೇ ಶತಕ ಸಾಧನೆ ಮಾಡಿದ್ದಾರೆ.ಈ ಎರಡು ಶತಕಗಳು ಮುಂಬೈ ವಿರುದ್ಧವೇ ದಾಖಲಾಗಿವೆ ಎಂಬುದು ಗಮನಾರ್ಹ.

ಈ ಮೂಲಕ ಐಪಿಎಲ್‌ ವೃತ್ತಿ ಜೀವನದಲ್ಲಿಒಟ್ಟು ನಾಲ್ಕು ಶತಕಗಳನ್ನು ಗಳಿಸಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ನೂತನ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್, ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

ಭಾನುವಾರ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಸ್ಮರಣೀಯ ಸಾಧನೆ ಮಾಡಿದರು.

61 ಎಸೆತಗಳಲ್ಲಿ ರಾಹುಲ್ ಶತಕ ಗಳಿಸಿದರು.

ಐಪಿಎಲ್ 14ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಮೂರು ಶತಕಗಳನ್ನು ಗಳಿಸಿದ್ದಾರೆ. ಬಟ್ಲರ್‌ಗೆ ನಿಕಟ ಪೈಪೋಟಿ ಒಡ್ಡುತ್ತಿರುವ ರಾಹುಲ್ ಈಗ ಎರಡನೇ ಶತಕ ಸಾಧನೆ ಮಾಡಿದ್ದಾರೆ. ಆದರೆ ಐಪಿಎಲ್ ವೃತ್ತಿ ಜೀವನದಲ್ಲಿ ಬಟ್ಲರ್ ಅವರ ನಾಲ್ಕು ಶತಕಗಳ ಸಾಧನೆಯನ್ನುಸರಿಗಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT