ಕೋಲ್ಕತ್ತ: ಇನಿಂಗ್ಸ್‌ನ ಮಧ್ಯದ ಹಂತದ ಓವರ್‌ಗಳಲ್ಲಿ ಎರಡು ಸಿಕ್ಸರ್‌ಗಳನ್ನು ಹೊಡೆದ್ದಿದ್ದರೆ ಪಂದ್ಯದ ಜಯ ತಮ್ಮ ತಂಡದತ್ತ ವಾಲುತ್ತಿತ್ತು. ನಮ್ಮ ಬ್ಯಾಟಿಂಗ್ ಪಡೆ ದೊಡ್ಡ ಹೊಡೆತಗಳನ್ನು ಆಡಲು ಪ್ರಯತ್ನಿಸಿತು. ಆದರೆ ಎದುರಾಳಿ ತಂಡದ ಬೌಲರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡಿದರು ಎಂದು ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಹೇಳಿದ್ದಾರೆ.

ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಸೋಲನುಭವಿಸಿತ್ತು. 208 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಲಖನೌ ತಂಡದ ರಾಹುಲ್ ಬಿರುಸಾದ ಬ್ಯಾಟಿಂಗ್ ಮಾಡಲಿಲ್ಲವೆಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಪವರ್‌ಪ್ಲೇ ನಂತರದ ಏಳು ಓವರ್‌ಗಳಲ್ಲಿ ರಾಹುಲ್ ಒಂದು ಬೌಂಡರಿ ಮಾತ್ರ ಗಳಿಸಿದ್ದರು. ಇದೇ ಮೊದಲ ಬಾರಿ ಟೂರ್ನಿಯಲ್ಲಿ ಆಡಿದ ಲಖನೌ ತಂಡವು ಗುರಿ ಬೆನ್ನಟ್ಟಿದ್ದ ಏಳು ಪಂದ್ಯಗಳ ಪೈಕಿ ಐದರಲ್ಲಿ ಸೋತಿದೆ.

‘ಟೂರ್ನಿಯಲ್ಲಿ ಚೇಸಿಂಗ್ ಮಾಡಿದ ಪಂದ್ಯಗಳಲ್ಲಿ ನಮ್ಮ ಸಾಧನೆ ಚೆನ್ನಾಗಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಈ ವಿಷಯದಲ್ಲಿ ಸುಧಾರಣೆಗೆ ಪ್ರಯತ್ನಿಸುತ್ತೇವೆ’ ಎಂದು ರಾಹುಲ್ ಹೇಳಿದರು.

ಈ ಪಂದ್ಯದಲ್ಲಿ ರಾಹುಲ್ 79 (58ಎಸೆತ) ರನ್ ಗಳಿಸಿದ್ದರು. ಟೂರ್ನಿ ಯಲ್ಲಿ ಒಟ್ಟು 600ಕ್ಕೂ ಹೆಚ್ಚು ರನ್‌ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.