ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಲೀಗ್ ಸುತ್ತಿನ ಕೊನೆಯ ಹಂತದ ನಾಟಕೀಯ ಲೆಕ್ಕಾಚಾರಗಳಲ್ಲಿ ಪ್ಲೇ ಆಫ್ ಅವಕಾಶ ಗಿಟ್ಟಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದೆ ಈಗ ಕಠಿಣ ಸವಾಲು ಇದೆ.

ಈಡನ್ ಗಾರ್ಡನ್ನಲ್ಲಿ ಬುಧವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಫಫ್ ಡುಪ್ಲೆಸಿ ನಾಯಕತ್ವದ ಬೆಂಗಳೂರು ಬಳಗಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ಎದುರಾಗಲಿದೆ. ಇದೇ ಮೊದಲ ಸಲ ಐಪಿಎಲ್ನಲ್ಲಿ ಕಣಕ್ಕಿಳಿದಿರುವ ಹೊಸ ತಂಡ ಲಖನೌ ಲೀಗ್ ಹಂತದಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದಿದೆ. ರಾಹುಲ್ ಎರಡು ಮತ್ತು ಕ್ವಿಂಟನ್ ಡಿಕಾಕ್ ಒಂದು ಶತಕ ಗಳಿಸಿದ್ದಾರೆ. ಕೋಲ್ಕತ್ತ ನೈಟ್ರೈಡರ್ಸ್ ಎದುರಿನ ಪಂದ್ಯದಲ್ಲಿ ಇವರಿಬ್ಬರೂ ಮೊದಲ ವಿಕೆಟ್ ಜೊತೆಯಾಟದಲ್ಲಿ ಅಜೇಯ 210 ರನ್ ಗಳಿಸಿ ದಾಖಲೆ ಬರೆದಿದ್ದರು.

ಎವಿನ್ ಲೂಯಿಸ್, ದೀಪಕ್ ಹೂಡಾ, ಆಲ್ರೌಂಡರ್ಗಳಾದ ಮಾರ್ಕಸ್ ಸ್ಟೊಯಿನಿಸ್ ಮತ್ತು ಜೇಸನ್ ಹೋಲ್ಡರ್ ಉತ್ತಮ ಫಾರ್ಮ್ನಲ್ಲಿರುವುದರಿಂದ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ. ಆರಂಭಿಕ ಓವರ್ಗಳಲ್ಲಿಯೇ ವಿಕೆಟ್ ಗಳಿಸುವ ಆವೇಶ್ ಖಾನ್, ಮೊಹಸೀನ್ ಖಾನ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯಿ ಅವರನ್ನು ಎದುರಿಸುವ ಸವಾಲು ಬೆಂಗಳೂರು ಬ್ಯಾಟಿಂಗ್ ಪಡೆಯ ಮುಂದಿದೆ.

ಸತತ ವೈಫಲ್ಯಗಳ ನಂತರ ವಿರಾಟ್ ಕೊಹ್ಲಿ ಕಳೆದ ಪಂದ್ಯದಲ್ಲಿ ಲಯಕ್ಕೆ ಮರಳಿರುವುದು ತಂಡದಲ್ಲಿ ಉತ್ಸಾಹ ಹೆಚ್ಚಿಸಿದೆ. ನಾಯಕ ಡುಪ್ಲೆಸಿ, ದಿನೇಶ್ ಕಾರ್ತಿಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ಆದರೆ ಬೌಲರ್ಗಳು ಸ್ಥಿರತೆ ಕಾಪಾಡಿಕೊಳ್ಳುವ ಸವಾಲು ತಂಡಕ್ಕೆ ಇದೆ. ಹರ್ಷಲ್ ಪಟೇಲ್, ಸ್ಪಿನ್ನರ್ ವಣಿಂದು ಹಸರಂಗಾ ಮತ್ತು ಜೋಶ್ ಹ್ಯಾಜಲ್ವುಡ್ ಅವರು ರಾಹುಲ್ ಪಡೆಯ ಅಬ್ಬರಕ್ಕೆ ತಡೆಯೊಡ್ಡುವಲ್ಲಿ ಸಫಲರಾದರೆ ಆರ್ಸಿಬಿಗೆ ಎರಡನೇ ಕ್ವಾಲಿಫೈಯರ್ ಪ್ರವೇಶಿಸುವ ಅವಕಾಶ ಲಭಿಸಬಹುದು.

ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ಎದುರು ಸೋತ ಕಾರಣಕ್ಕೆ ಆರ್ಸಿಬಿಯ ಹಾದಿ ಸುಗಮವಾಗಿತ್ತು. ಅದರಿಂದಾಗಿ ಸತತ ಮೂರನೇ ಆವೃತ್ತಿಯಲ್ಲಿಯೂ ಪ್ಲೇ ಆಫ್ ಪ್ರವೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.