ಶುಕ್ರವಾರ, ಮೇ 20, 2022
19 °C

ಟಿ20 ಕ್ರಿಕೆಟ್‌ನಲ್ಲಿ ನಾಯಕರಾಗಿ 6,000 ರನ್ - ಕೊಹ್ಲಿ ಸಾಲಿಗೆ ಧೋನಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ನಾಯಕರಾಗಿ ಮಹೇಂದ್ರ ಸಿಂಗ್ ಧೋನಿ 6,000 ರನ್‌ಗಳ ಸಾಧನೆ ಮಾಡಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ ಸಾಲಿಗೆ ಸೇರಿದ್ದಾರೆ. ಅಲ್ಲದೆ ಕೊಹ್ಲಿ ಬಳಿಕ ಈ ಸಾಧನೆ ಮಾಡಿದ ಎರಡನೇ ಕಪ್ತಾನ ಎನಿಸಿದ್ದಾರೆ.

ಇದನ್ನೂ ಓದಿ: 

ನಾಯಕರಾಗಿ ವಿರಾಟ್ ಕೊಹ್ಲಿ 190 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದು, 43.29ರ ಸರಾಸರಿ ಕಾಪಾಡಿಕೊಂಡಿದ್ದಾರೆ. ಅಲ್ಲದೆ 48 ಅರ್ಧಶತಕ ಹಾಗೂ ಐದು ಶತಕಗಳನ್ನು ಗಳಿಸಿದ್ದಾರೆ.

ಅತ್ತ ಕಪ್ತಾನರಾಗಿ ಧೋನಿ 303ನೇ ಪಂದ್ಯದಲ್ಲಿ 6,000 ರನ್ ಗಳಿಸಿದ್ದಾರೆ. ಮಹಿ 38.57ರ ಸರಾಸರಿ ಹೊಂದಿದ್ದು, 23 ಅರ್ಧಶತಕಗಳನ್ನು ಗಳಿಸಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ, ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಎಂಟು ಎಸೆತಗಳಲ್ಲಿ 21 ರನ್ ಗಳಿಸಿ ಔಟಾಗದೆ ಉಳಿದರು. ಧೋನಿ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿ ಸೇರಿದ್ದವು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು