ಶನಿವಾರ, ಮೇ 28, 2022
26 °C

IPL 2022: ಮುಂಬೈ ಪ್ಲೇ-ಆಫ್ ಕನಸು ಭಗ್ನ; ಟೂರ್ನಿಯಿಂದ ಹೊರಕ್ಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ಲೇ-ಆಫ್ ಕನಸು ಭಗ್ನಗೊಂಡಿದೆ. 

ಇದರೊಂದಿಗೆ ಐಪಿಎಲ್ 2022 ಟೂರ್ನಿಯಿಂದ ನಿರ್ಗಮಿಸಿದ ಮೊದಲ ತಂಡವೆಂಬ ಅಪಖ್ಯಾತಿಗೆ ಒಳಗಾಗಿದೆ. 

ಇದನ್ನೂ ಓದಿ: 

ಟೂರ್ನಿ ಆರಂಭದಲ್ಲಿ ಸತತ ಎಂಟು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ರೋಹಿತ್ ಶರ್ಮಾ ಬಳಗವು ಬಳಿಕ ಜಯದ ಹಾದಿಗೆ ಮರಳಿತ್ತಲ್ಲದೆ ಸತತ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. 

ಆದರೆ ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು ದಾಖಲಿಸುವುದರೊಂದಿಗೆ ಮುಂಬೈ ಪ್ಲೇ-ಆಫ್ ಕನಸು ಭಗ್ನಗೊಂಡಿದೆ.  

10 ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಗಳಿಸಿರುವ ಮುಂಬೈ ಒಟ್ಟು 4 ಅಂಕ ಮಾತ್ರ ಗಳಿಸಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅಲ್ಲದೆ ಲೀಗ್ ಹಂತದಲ್ಲಿ ಇನ್ನೂ ನಾಲ್ಕು ಪಂದ್ಯಗಳು ಉಳಿದಿವೆ.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು