ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗೆ ಕೋವಿಡ್ ಪಾಸಿಟಿವ್, ಪ್ರತ್ಯೇಕವಾಸ 

ಅಕ್ಷರ ಗಾತ್ರ

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ಶಿಬಿರದ ಒಬ್ಬ ಸದಸ್ಯನಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ತಂಡದ ಆಟಗಾರರನ್ನು ಪ್ರತ್ಯೇಕವಾಸಕ್ಕೆ ಒಳಪಡಿಸಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನೆಟ್ ಬೌಲರ್‌ ಒಬ್ಬರಿಗೆ ಕೊರೊನಾ ಪರೀಕ್ಷೆ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಅವರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.

ಇಂದು (ಭಾನುವಾರ) ಸಂಜೆ ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತನ್ನ 11ನೇ ಪಂದ್ಯವನ್ನು ಆಡುವ ಕೆಲವೇ ಗಂಟೆಗಳ ಮುನ್ನ ಈ ಬೆಳವಣಿಗೆ ನಡೆದಿದೆ.

ಕೆಲವು ದಿನಗಳ ಹಿಂದೆಯಷ್ಟೇ ಡೆಲ್ಲಿ ತಂಡದ ಫಿಸಿಯೊ ಪ್ಯಾಟ್ರಿಕ್ ಫರ್ಹಾರ್ಟ್‌ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬಳಿಕ ಅವರು ಪ್ರತ್ಯೇಕವಾಸಕ್ಕೆ ಒಳಗಾಗಿದ್ದರು.

ಪ್ರಸಕ್ತ ಟೂರ್ನಿ ಡೆಲ್ಲಿ ಆಡಿರುವ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು, 5ರಲ್ಲಿ ಸೋಲು ಕಂಡಿದೆ. ಪಾಯಿಂಟ್ಸ್‌ ಪಟ್ಟಿಯಲ್ಲಿ 10 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

ಇತ್ತ ಚೆನ್ನೈ ಕಳಪೆ ಪ್ರದರ್ಶನದಿಂದಾಗಿ ಆಡಿರುವ 10 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದ್ದು, 7ರಲ್ಲಿ ಸೋಲು ಕಂಡಿದೆ. ಪಾಯಿಂಟ್ಸ್‌ ಪಟ್ಟಿಯಲ್ಲಿ 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ.

ಕೋವಿಡ್‌ ಕಾರಣದಿಂದಾಗಿ ಇತ್ತೀಚಿಗೆ ಪುಣೆಯಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಕ್ಯಾಪಿಟಲ್ಸ್ ಪಂದ್ಯಗಳನ್ನು ಮುಂಬೈಗೆ ಸ್ಥಳಾಂತರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT