ಬುಧವಾರ, ಮೇ 25, 2022
22 °C

IPL 2022: ಅದ್ಭುತ ಕ್ಯಾಚ್ ಹಿಡಿದ ಸೂಪರ್‌ಮ್ಯಾನ್ ಬಟ್ಲರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ.

ಶನಿವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿಯುವ ಮೂಲಕ ಬಟ್ಲರ್ ಮೋಡಿ ಮಾಡಿದರು.

ಇದನ್ನೂ ಓದಿ: 

ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಈ ವೇಳೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಇನ್ನಿಂಗ್ಸ್‌ನ ಆರನೇ ಓವರ್‌ನಲ್ಲಿ ಶಿಖರ್ ಧವನ್ ಹೊಡೆದ ಚೆಂಡನ್ನು ಮಿಡ್-ಆನ್‌ನಲ್ಲಿ ಕ್ಷೇತ್ರರಕ್ಷಣೆ ಮಾಡುತ್ತಿದ್ದ ಬಟ್ಲರ್ ಮೇಲಕ್ಕೆ ಹಾರಿ ಕ್ಯಾಚ್ ಹಿಡಿದರು.

ಪರಿಣಾಮ 12 ರನ್ ಗಳಿಸಿದ್ದ ಧವನ್ ಔಟ್ ಆಗಿ ಪೆವಿಲಿಯನ್‌ಗೆ ಮರಳಿದರು.

 

 

 

ಇದೇ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅವರು ಹಿಡಿದಿರುವ ಕ್ಯಾಚ್‌ಗೆ ಹೋಲುವ ರೀತಿಯಲ್ಲಿ ಬಟ್ಲರ್ ಕ್ಯಾಚ್ ಹಿಡಿದಿದ್ದಾರೆ ಎಂದು ಅಭಿಮಾನಿಗಳು ಶ್ಲಾಘಿಸಿದ್ದಾರೆ.

 

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಮುನ್ನಡೆಯಲ್ಲಿರುವ ಬಟ್ಲರ್, ಇದುವರೆಗೆ 10 ಪಂದ್ಯಗಳಲ್ಲಿ 65.33ರ ಸರಾಸರಿಯಲ್ಲಿ 588 ರನ್ ಗಳಿಸಿದ್ದಾರೆ.

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು