ರಾಣಾಗೆ ದಂಡ; ಬೂಮ್ರಾಗೆ ವಾಗ್ದಂಡನೆ

ಮುಂಬೈ: ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಬ್ಯಾಟರ್ ನಿತೀಶ್ ರಾಣಾ ಅವರಿಗೆ ಪಂದ್ಯದ ಸಂಭಾವನೆಯ ಶೇ 10ರಷ್ಟು ದಂಡ ಮತ್ತು ಮುಂಬೈ ಇಂಡಿಯನ್ಸ್ ಬೌಲರ್ ಜಸ್ಪ್ರೀತ್ ಬೂಮ್ರಾ ಅವರಿಗೆ ಎಚ್ಚರಿಕೆ ನೀಡಲಾಗಿದೆ.
ಬುಧವಾರ ನಡೆದ ಕೊಲ್ಕತ್ತ ಮತ್ತು ಮುಂಬೈ ನಡುವಣ ಪಂದ್ಯದಲ್ಲಿ ಇವರಿಬ್ಬರೂ ಲೆವಲ್ –1 ನಿಯಮ ಉಲ್ಲಂಘನೆ ಮಾಡಿದ್ದರು ಎಂದು ಐಪಿಎಲ್ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿತೀಶ್ ಮತ್ತು ಬೂಮ್ರಾ ಅವರು ತಮ್ಮ ತಪ್ಪನ್ನು ವಿಚಾರಣೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದಾರೆ. ಅಶಿಸ್ತಿನ ವರ್ತನೆಗಾಗಿ ಈ ದಂಡ ವಿಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.