ಶುಕ್ರವಾರ, ಮೇ 20, 2022
20 °C

IPL: ಕ್ರಿಕೆಟ್ ಅಥವಾ ಹಾಕಿ ? ಅಶ್ವಿನ್ ಬ್ಯಾಟಿಂಗ್ ಶೈಲಿಗೆ ನೆಟ್ಟಿಗರಿಂದ ಟ್ರೋಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಪ್ರತಿಯೊಬ್ಬ ಬ್ಯಾಟರ್ ತಮ್ಮದೇ ಆದ ಬ್ಯಾಟಿಂಗ್ ಶೈಲಿ ಹೊಂದಿರುತ್ತಾರೆ. ರಾಹುಲ್ ದ್ರಾವಿಡ್ ಅವರಂತಹ ಸ್ಟೈಲಿಷ್ ಕ್ರಿಕೆಟಿಗರನ್ನು ನಾವು ಕಂಡಿದ್ದೇವೆ.

ಹಾಗಿರಬೇಕೆಂದರೆ ಈಗ ಐಪಿಎಲ್ ಟೂರ್ನಿಯಲ್ಲಿ ವಿಚಿತ್ರ ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ರವಿಚಂದ್ರನ್ ಅಶ್ವಿನ್ ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ: 

ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅಶ್ವಿನ್, ವಿಚಿತ್ರ ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಕುರಿತು ಕ್ರಿಕೆಟ್ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಇದು ಹಾಕಿ ಅಥವಾ ಕ್ರಿಕೆಟ್ ? ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

 

 

 

ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅಶ್ವಿನ್, ಐಪಿಎಲ್‌ನಲ್ಲಿ ಚೊಚ್ಚಲ ಅರ್ಧಶತಕ ಗಳಿಸಿದ್ದರು. ಈ ಮೂಲಕ ಬ್ಯಾಟಿಂಗ್‌ನಲ್ಲೂ ಸಾಮರ್ಥ್ಯ ಮೆರೆದಿದ್ದಾರೆ.

 

38 ಎಸೆತಗಳನ್ನು ಎದುರಿಸಿದ ಅಶ್ವಿನ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು.

ಆದರೂ ಅಶ್ವಿನ್ ಹೋರಾಟ ವ್ಯರ್ಥವೆನಿಸಿತು. ರಾಜಸ್ಥಾನ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಎಂಟು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು.

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು