ಶುಕ್ರವಾರ, ಮೇ 27, 2022
21 °C

IPL 2022: ಮುಂಬೈ ವಿರುದ್ಧದ ಗೆಲುವಿನ ಬಳಿಕ ಬಯೋಬಬಲ್ ತೊರೆದ ಹರ್ಷಲ್ ಪಟೇಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಹರ್ಷಲ್ ಪಟೇಲ್, ಬಯೋಬಬಲ್ ತೊರೆದಿದ್ದಾರೆ.

ಹರ್ಷಲ್ ಪಟೇಲ್ ಸಹೋದರಿ ನಿಧನ ಹೊಂದಿದ್ದಾರೆ. ಕುಟುಂಬದ ಈ ದುಃಖದ ವಾರ್ತೆ ತಿಳಿದ ಕೂಡಲೇ ಹರ್ಷಲ್ ಪಟೇಲ್ ಬಯೋಬಬಲ್ ತೊರೆದಿದ್ದಾರೆ ಎಂದು ಐಪಿಎಲ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ಕಳೆದೆರಡು ಆವೃತ್ತಿಗಳಲ್ಲಿ ಆರ್‌ಸಿಬಿಯ ಸ್ಟಾರ್ ಆಟಗಾರನಾಗಿರುವ ಹರ್ಷಲ್ ಅವರನ್ನು ಐಪಿಎಲ್ ಮೆಗಾ ಹರಾಜಿಗೂ ಮುನ್ನ ತಂಡದಲ್ಲಿಯೇ ಉಳಿಸಿಕೊಳ್ಳಲಾಗಿತ್ತು. ಮುಂಬೈ ವಿರುದ್ಧದ ಪಂದ್ಯದಲ್ಲಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಏಪ್ರಿಲ್ 12ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಹರ್ಷಲ್ ಪಟೇಲ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು