ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL: ಟ್ವಿಟರ್‌ನಲ್ಲೂ ಬಿರುಗಾಳಿ ಎಬ್ಬಿಸಿದ ಕಿಂಗ್ ಕೊಹ್ಲಿ, ಅಭಿಮಾನಿಗಳ ಸಂಭ್ರಮ

Last Updated 30 ಏಪ್ರಿಲ್ 2022, 12:38 IST
ಅಕ್ಷರ ಗಾತ್ರ

ಮುಂಬೈ: ಆಕರ್ಷಕ ಅರ್ಧಶತಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ, ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲೂ ಸದ್ದು ಮಾಡಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೊಹ್ಲಿ, ಅಮೋಘ ಬ್ಯಾಟಿಂಗ್ ಮೂಲಕ ಗಮನ ಸೆಳೆದರು.

ಅಭಿಮಾನಿಗಳು ಕೊಹ್ಲಿ ಅರ್ಧಶತಕದ ಸಂಭ್ರಮವನ್ನು ಆಚರಿಸಿಕೊಳುತ್ತಿದ್ದಾರೆ. ಇದು ಅತ್ಯಂತ ಸಂತೋಷದಾಯಕ ಕ್ಷಣ ಎಂದು ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದಾರೆ.

'ಫಾರ್ಮ್ ತಾತ್ಕಾಲಿಕ, ಕ್ಲಾಸ್ ಶಾಶ್ವತ', 'ತಾಳ್ಮೆಯಿಂದಿರಿ, ಕೊಹ್ಲಿ ಮೇಲೆ ನಂಬಿಕೆಯನ್ನಿಡಿ' ಎಂದು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ.

#ViratKohli #KingKohli ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ.

ವಿರಾಟ್ ಕೊಹ್ಲಿ ಅರ್ಧಶತಕದ ವೇಳೆ ಪಂದ್ಯ ವೀಕ್ಷಿಸುತ್ತಿದ್ದ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮ ಆಚರಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT