ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆದ 14 ಐಪಿಎಲ್ ಪಂದ್ಯಗಳಲ್ಲಿ ಕೊಹ್ಲಿ ಮೊದಲ ಫಿಫ್ಟಿ; ಪತ್ನಿ ಅನುಷ್ಕಾ ಸಂಭ್ರಮ

Last Updated 30 ಏಪ್ರಿಲ್ 2022, 13:09 IST
ಅಕ್ಷರ ಗಾತ್ರ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಲಯಕ್ಕೆ ಮರಳಿದ್ದಾರೆ.

ಶನಿವಾರ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದ್ದಾರೆ.

ಈ ಮೂಲಕ ಕಳೆದ 14 ಐಪಿಎಲ್ ಪಂದ್ಯಗಳಲ್ಲಿ ಮೊದಲ ಅರ್ಧಶತಕ ಸಾಧನೆ ಮಾಡಿದ್ದಾರೆ. ಈ ಪೈಕಿ ಪ್ರಸಕ್ತ ಸಾಲಿನಲ್ಲಿ ಮೊದಲ ಒಂಬತ್ತು ಪಂದ್ಯಗಳಲ್ಲಿ ಎರಡು ಬಾರಿ ಗೋಲ್ಡನ್ ಡಕ್ ಔಟ್ ಆಗಿದ್ದ ಕೊಹ್ಲಿ ಅರ್ಧಶತಕ ಗಳಿಸಲು ವಿಫಲರಾಗಿದ್ದರು.

ಒಟ್ಟಾರೆಯಾಗಿ ಐಪಿಎಲ್ ವೃತ್ತಿ ಜೀವನದಲ್ಲಿ 43ನೇ ಅರ್ಧಶತಕ ಗಳಿಸಿದ್ದಾರೆ.

ಗ್ಯಾಲರಿಯಲ್ಲಿ ಕುಳಿತುಕೊಂಡು ಕೊಹ್ಲಿ ಬ್ಯಾಟಿಂಗ್ ವೀಕ್ಷಿಸುತ್ತಿದ್ದ ಪತ್ನಿ ಅನುಷ್ಕಾ ಶರ್ಮಾ, ಸಂಭ್ರಮ ಆಚರಿಸಿದ್ದಾರೆ. ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

53 ಎಸೆತಗಳನ್ನು ಎದುರಿಸಿದ ಕೊಹ್ಲಿ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT