ಭಾನುವಾರ, ಜೂನ್ 26, 2022
27 °C

IPL 2022: ಐಪಿಎಲ್‌ನಲ್ಲಿ ರಜತ್ ಪಾಟಿದಾರ್ ಚೊಚ್ಚಲ ಶತಕ ಸಾಧನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ರಜತ್ ಪಾಟಿದಾರ್ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ. 

ಐಪಿಎಲ್ 2022 ಟೂರ್ನಿಯಲ್ಲಿ ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಪ್ಲೇ-ಆಫ್‌ನ ಎಲಿಮಿನೇಟರ್ ಪಂದ್ಯದಲ್ಲಿ ಪಾಟಿದಾರ್ ಅಬ್ಬರಿಸಿದರು. 

ಇದನ್ನೂ ಓದಿ: 

ನಾಯಕ ಫಫ್ ಡುಪ್ಲೆಸಿ, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ವಿಕೆಟ್‌ಗಳನ್ನು ಕಳೆದುಕೊಂಡ ಆರ್‌ಸಿಬಿ ಸಂಕಷ್ಟಕ್ಕೆ ಒಳಗಾಗಿತ್ತು. 

ಆದರೆ ವಿಕೆಟ್‌ನ ಇನ್ನೊಂದು ತುದಿಯಿಂದ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಪಾಟಿದಾರ್ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು. 

ಪಾಟಿದಾರ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಫಿಫ್ಟಿ ಬಳಿಕವೂ ಅಬ್ಬರಿಸಿದ ಪಾಟಿದಾರ್ 49 ಎಸೆತಗಳಲ್ಲಿ ಚೊಚ್ಚಲ ಶತಕ ಪೂರ್ಣಗೊಳಿಸಿದರು. 

ಇದೇ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಪಾಟಿದಾರ್ ಚೊಚ್ಚಲ ಅರ್ಧಶತಕ ಸಾಧನೆ ಮಾಡಿದ್ದರು. ಈಗ ತಮ್ಮದೇ ವೈಯಕ್ತಿಕ ಗರಿಷ್ಠ ಮೊತ್ತವನ್ನು ಉತ್ತಮಪಡಿಸಿದ್ದಾರೆ. 

ಅತಿ ಒತ್ತಡದ ಪಂದ್ಯದಲ್ಲಿ ಲಖನೌ ಬೌಲರ್‌ಗಳನ್ನು ನಿರ್ದಯವಾಗಿ ಎದುರಿಸಿದ ಪಾಟಿದಾರ್, ಪ್ಲೇ-ಆಫ್ ಪಂದ್ಯದಲ್ಲಿ ಶತಕ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದರು.  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು