ಸೋಮವಾರ, ಮೇ 23, 2022
30 °C

IPL 2022: ಮಗದೊಂದು ಸ್ಮರಣೀಯ ದಾಖಲೆ ಬರೆದ ರೋಹಿತ್ ಶರ್ಮಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ರೋಹಿತ್ ಶರ್ಮಾ, ಮಗದೊಂದು ಮೈಲಿಗಲ್ಲು ಸ್ಥಾಪಿಸಿದ್ದು, 150 ಕ್ಯಾಚ್‌ ಹಿಡಿದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಈ ಸ್ಮರಣೀಯ ಮೈಲಿಗಲ್ಲು ತಲುಪಿದರು. 

ಇದನ್ನೂ ಓದಿ: 

ಈ ಮೂಲಕ ಈ ಸಾಧನೆ ಮಾಡಿದ ಭಾರತದ ಎರಡನೇ ಫೀಲ್ಡರ್ ಹಾಗೂ ಒಟ್ಟಾರೆಯಾಗಿ ಭಾರತದ ನಾಲ್ಕನೇ ಆಟಗಾರ ಎನಿಸಿದರು.

ಚುಟುಕು ಕ್ರಿಕೆಟ್‌ನಲ್ಲಿ ಭಾರತದ ಪರ ವಿಕೆಟ್ ಕೀಪರ್‌ಗಳಾದ ಮಹೇಂದ್ರ ಸಿಂಗ್ ಧೋನಿ (200) ಹಾಗೂ ದಿನೇಶ್ ಕಾರ್ತಿಕ್ (192) ಅತಿ ಹೆಚ್ಚು ಕ್ಯಾಚ್‌ ಹಿಡಿದಿದ್ದಾರೆ.

ಇನ್ನು ಫೀಲ್ಡರ್‌ಗಳ ಪೈಕಿ ಸುರೇಶ್ ರೈನಾ (172) ನಂತರದ ಸ್ಥಾನವನ್ನು ರೋಹಿತ್ ಅಲಂಕರಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ಕ್ಯಾಚ್ ಹಿಡಿದ ಭಾರತೀಯ ಆಟಗಾರರ ಪಟ್ಟಿ:
ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್): 200
ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್): 192
ಸುರೇಶ್ ರೈನಾ: 172
ರೋಹಿತ್ ಶರ್ಮಾ: 150

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು