ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022: ಮುಂಬೈ ಇಂಡಿಯನ್ಸ್ ಪರ 200 ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ

ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶರ್ಮಾ, 200 ಸಿಕ್ಸರ್‌ಗಳ ಸಾಧನೆ ಮಾಡಿದ್ದಾರೆ.

ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಸ್ಮರಣೀಯ ಸಾಧನೆ ಮಾಡಿದರು.

ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಒಟ್ಟು 236 ಸಿಕ್ಸರ್‌ ಸಿಡಿಸಿದ್ದಾರೆ. ಈ ಪೈಕಿ ಮುಂಬೈ ಪರ ಸಿಕ್ಸರ್‌ಗಳ ದ್ವಿಶತಕ ಗಳಿಸಿದ್ದಾರೆ.

ಗುಜರಾತ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್, 28 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದ್ದರು.

ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ (357) ಮುನ್ನಡೆಯಲ್ಲಿದ್ದು, ಎಬಿ ಡಿವಿಲಿಯರ್ಸ್ (251) ಎರಡನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT