ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2022 RCB vs KKR: ಕೆಕೆಆರ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್

Last Updated 30 ಮಾರ್ಚ್ 2022, 13:46 IST
ಅಕ್ಷರ ಗಾತ್ರ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ತಾನ ಫಫ್ ಡುಪ್ಲೆಸಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲಿಗೆ ಶರಣಾಗಿತ್ತು. ಪಂಜಾಬ್ ಕಿಂಗ್ಸ್ ತಂಡಕ್ಕೆ 206 ರನ್‌ಗಳ ಕಠಿಣ ಗುರಿ ನೀಡುವಲ್ಲಿ ಯಶಸ್ವಿಯಾಗಿದ್ದ ಫಫ್ ಡುಪ್ಲೆಸಿ ನಾಯಕತ್ವದ ಬೆಂಗಳೂರು ತಂಡವು ಸೋಲನುಭವಿಸಿತ್ತು.

ನಾಯಕನಾಗಿ ಆರ್‌ಸಿಬಿ ಪರ ಪದಾರ್ಪಣೆ ಮಾಡಿದ್ದ ಫಫ್ ಡುಪ್ಲೆಸಿ 88 ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಕೂಡ ಮಹತ್ವದ ಕಾಣಿಕೆ ಕೊಟ್ಟಿದ್ದರು. ಆದರೆ ಕಳಪೆ ಬೌಲಿಂಗ್‌ನಿಂದಾಗಿ ಸೋಲು ಎದುರಿಸಬೇಕಾಯಿತು.

ಇನ್ನೊಂದೆಡೆ ಟೂರ್ನಿಯ ಉದ್ಘಾಟನೆ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಶುಭಾರಂಭ ಮಾಡಿರುವ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತ ಸಂಪೂರ್ಣ ಆತ್ಮವಿಶ್ವಾಸದಲ್ಲಿದೆ.

ಪ್ಲೇಯಿಂಗ್ ಇಲೆವೆನ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಫಫ್ ಡುಪ್ಲೆಸಿ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫಾನೆ ರುಥರ್‌ಫಾರ್ಡ್, ಶಹಬಾಜ್ ಅಹಮದ್, ವಣಿಂದು ಹಸರಂಗಾ, ಡೇವಿಡ್ ಮಿಲ್ಲರ್, ಹರ್ಷಲ್ ಪಟೇಲ್, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್.

ಕೋಲ್ಕತ್ತ ನೈಟ್ ರೈಡರ್ಸ್:
ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಆ್ಯಂಡ್ರೆ ರಸೆಲ್, ಸುನಿಲ್ ನಾರಾಯಣ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT