ಬುಧವಾರ, ಮೇ 18, 2022
23 °C

IPL 2022: ಐಪಿಎಲ್‌ನಲ್ಲಿ ರವಿಚಂದ್ರನ್ ಅಶ್ವಿನ್ ಚೊಚ್ಚಲ ಅರ್ಧಶತಕ ಸಾಧನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರವಿಚಂದ್ರನ್ ಅಶ್ವಿನ್ ಚೊಚ್ಚಲ ಅರ್ಧಶತಕ ಸಾಧನೆ ಮಾಡಿದ್ದಾರೆ. 

ಐಪಿಎಲ್ 2022 ಟೂರ್ನಿಯಲ್ಲಿ ರಾಜಸ್ಥಾನ್ ಪರ ಆಡುತ್ತಿರುವ ಅಶ್ವಿನ್, ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಇನ್ನಿಂಗ್ಸ್ ಕಟ್ಟಿದರು. 

'ಕ್ರಿಕ್‌ಬಜ್' ಮಾಹಿತಿ ಪ್ರಕಾರ, 179ನೇ ಪಂದ್ಯದ 72ನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಚೊಚ್ಚಲ ಅರ್ಧಶತಕ ಗಳಿಸಿದರು. ಒಟ್ಟಾರೆಯಾಗಿ ಐಪಿಎಲ್‌ನಲ್ಲಿ 12.53ರ ಸರಾಸರಿಯಲ್ಲಿ 589 ರನ್ ಗಳಿಸಿದ್ದಾರೆ. 

38 ಎಸೆತಗಳನ್ನು ಎದುರಿಸಿದ ಅಶ್ವಿನ್ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು. 

ಅಶ್ವಿನ್ ಒಟ್ಟು 154 ವಿಕೆಟ್‌ಗಳನ್ನು ಗಳಿಸಿದ್ದಾರೆ. 34 ರನ್ನಿಗೆ ನಾಲ್ಕು ವಿಕೆಟ್ ಗಳಿಸಿರುವುದು ಸರ್ವಶ್ರೇಷ್ಠ ಸಾಧನೆಯಾಗಿದೆ. 

ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಅಶ್ವಿನ್ ಇದುವರೆಗಿನ 11 ಪಂದ್ಯಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಲ್ಲದೆ 7.18 ಎಕಾನಮಿ ಕಾಪಾಡಿಕೊಂಡಿದ್ದು, ಪರಿಣಾಮಕಾರಿ ಎನಿಸಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು